Latest

ಚಿಟಗುಪ್ಪ ಶಿರಸ್ತೇದಾರ್ ಅಪಹರಣ-ಹಲ್ಲೆ ಪ್ರಕರಣ: ತಹಶೀಲ್ದಾರ್ ಜಯಶ್ರೀ ಪತಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಚಿಟಗುಪ್ಪ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಸುಭಾಷ್ ಚಂದ್ರ ಅವರ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಜಯಶ್ರೀ, ಅವರ ಪತಿ ಶಾರಧಕ್ ಹಾಗೂ ಇನ್ನೂ ಮೂವರು ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೇ 16ರಂದು ಸುಭಾಷ್ ಚಂದ್ರ ಅವರು ಕೆಲಸ ಮುಗಿಸಿ ಬಸ್ ಮೂಲಕ ತಮ್ಮ ಸ್ವಗ್ರಾಮ ಸುಲೆಪೇಟೆ (ಚಿಂಚೋಳಿ ತಾಲ್ಲೂಕು, ಕಲಬುರಗಿ ಜಿಲ್ಲೆ) ಕಡೆಗೆ ತೆರಳುತ್ತಿದ್ದರು. ಈ ವೇಳೆ ಕುಡಂಬಲ್ ಗ್ರಾಮದ ಪೆಟ್ರೋಲ್ ಬಂಕ್ ಹತ್ತಿರ ಜಯಶ್ರೀ ಅವರ ಪತಿ ಹಾಗೂ ಮತ್ತಷ್ಟು ವ್ಯಕ್ತಿಗಳು ಬಸ್‌ಗೆ ಕಾರು ಅಡ್ಡಹಾಕಿ ಸುಭಾಷ್ ಚಂದ್ರರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಅನಂತರ ಅವರನ್ನು ಹತ್ತಿರದ ಡಾಬಾ ಪಕ್ಕದ ಖಾಲಿ ಕೋಣೆಯೊಂದರಲ್ಲಿ ಕರೆದೊಯ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾದ್ದಾರೆ ಎಂದು ಸುಭಾಷ್ ಚಂದ್ರ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಹಿಂದಿರುವ ಕಾರಣ ಎಂದು ಶಂಕಿಸಲಾಗುತ್ತಿರುವುದೇನಂದರೆ, ತಹಶೀಲ್ದಾರ್ ಕಚೇರಿಯಲ್ಲಿ ಜಯಶ್ರೀ ಮತ್ತು ಸುಭಾಷ್ ಚಂದ್ರರ ನಡುವೆ ಕಾರ್ಯನಿಮಿತ್ತವಾಗಿ ಕೆಲವು ದಿನಗಳಿಂದ ಬಿಕ್ಕಟ್ಟು ನಡೆದುಬರುತ್ತಿತ್ತು.

ಈ ಘಟನೆಯ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಸರ್ಕಾರಿ ಅಧಿಕಾರಿಗಳ ನಡುವಿನ ವೈಯಕ್ತಿಕ ದ್ವೇಷ ಈ ಮಟ್ಟದ ಗಂಭೀರ ಘಟನೆಯಾಗಿ ಬೆಳೆಯುವುದು ಬೇಸರವೀಗಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago