Latest

ಚಿತ್ರದುರ್ಗದಲ್ಲಿ ಆನ್ಲೈನ್ ಹೂಡಿಕೆ ಹೆಸರಿನಲ್ಲಿ ₹34 ಲಕ್ಷ ವಂಚನೆ: ಮೂವರು ಆರೋಪಿಗಳ ಅರೆಸ್ಟ್

ಚಿತ್ರದುರ್ಗ, ಫೆಬ್ರವರಿ 17: ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಭರ್ಜರಿ ಕಾರ್ಯಾಚರಣೆ ನಡೆಸಿದ ಚಿತ್ರದುರ್ಗ ಸಿಇಎನ್ (ಸೈಬರ್, ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಮ್) ಪೊಲೀಸರು ಮೂವರು ಆನ್ಲೈನ್ ವಂಚಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿಯ ಪ್ರಥ್ವೇಶ್ (25), ಚಿಕ್ಕಮಗಳೂರು ಜಿಲ್ಲೆಯ ನಂದೀಶ (24) ಮತ್ತು ಬೆಂಗಳೂರಿನ ಉಮರ್ ಫಾರೂಕ್ (24) ಎಂದು ಗುರುತಿಸಲಾಗಿದೆ. ಅವರಿಂದ ಮೂರು ಮೊಬೈಲ್‌ ಫೋನ್‌ಗಳು ಹಾಗೂ ವಂಚಿತ ಹಣದಿಂದ ಖರೀದಿಸಲಾದ ₹4.5 ಲಕ್ಷ ಮೌಲ್ಯದ ಮಹೀಂದ್ರ XUV 700 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ವಿವರ:

ಆರೋಪಿಗಳು “K3-Gold Stock Investor Discussion Group” ಎಂಬ WhatsApp ಗುಂಪಿನ ಮೂಲಕ Fyers ಶೇರು ಮಾರುಕಟ್ಟೆ ಪ್ಲಾಟ್‌ಫಾರ್ಮ್ ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವಾಗುತ್ತದೆ ಎಂದು ಆಮಿಷ ಒಡ್ಡಿ, ಚಿತ್ರದುರ್ಗ ನಿವಾಸಿ ಸೈಯದ್ ಸಿರಾಜ್ ಬಂಡಿ ಅವರಿಂದ ₹34 ಲಕ್ಷ ಹಣವನ್ನು ವಂಚಿಸಿದ್ದಾರೆ.

ಆರೋಪಿಗಳು ಶೇರು ಹೂಡಿಕೆ ಹೆಸರಿನಲ್ಲಿ ಮೋಸ ಮಾಡಿರುವ ಬಗ್ಗೆ ಸೈಯದ್ ಸಿರಾಜ್ ಬಂಡಿ 2023ರ ನವೆಂಬರ್ 23 ರಂದು ಚಿತ್ರದುರ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ನಡೆಸಿದ ಕಾರ್ಯಾಚರಣೆ:

ದೂರು ಸ್ವೀಕರಿಸಿದ ನಂತರ, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಬಂಡಾರು (IPS) ಹಾಗೂ ಸಿಇಎನ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಯಿತು.

ಪೊಲೀಸ್ ನಿರೀಕ್ಷಕ: ವೆಂಕಟೇಶ್.ಎನ್

ASI: ಅಂಜನಪ್ಪ

Head Constables: ಕೆಂಚಪ್ಪ, ಗಂಗಾಧರಪ್ಪ

CPC: ಗಗನ್ ದೀಪ್

ವೈಜ್ಞಾನಿಕ ತನಿಖೆ ಹಾಗೂ ಹಣದ ಹರಿವಿನ ಪರಿವೀಕ್ಷಣೆಯ ಮೂಲಕ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುನ್ನಡೆ ನೀಡಲಾಯಿತು. ಕೊನೆಗೂ, ವಿಶೇಷ ತಂಡ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.

ಸೈಬರ್ ಕ್ರೈಮ್ ವಿಭಾಗದ ಆಶಾ, ಹರ್ಷವರ್ಧನ್ ಹಾಗೂ ಲೋಕೇಶ್ ಎಂಬುವವರು ತಾಂತ್ರಿಕ ವಿಶ್ಲೇಷಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅವರ ಶ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.

ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago