Latest

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಲ್ ಇನ್‍ಸ್ಪೆಕ್ಟರ್

ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಸರ್ಕಲ್ ಇನ್‍ಸ್ಪೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪಟ್ಟಣದಲ್ಲಿ ವರದಿಯಾಗಿದೆ.
ನರಸಿಂಹರಾಜಪುರ ಸರ್ಕಲ್ ಇನ್‍ಸ್ಪೆಕ್ಟರ್ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಧಿಕಾರಿ ವಸಂತ್ ಶಂಕರ್ ಅವರು ಮುಸ್ತಫ್ ಅಲಿ ಎಂಬವರಿಗೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ ಮುಸ್ತಫ್ ಅಲಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರೆನ್ನಲಾಗಿದೆ.
ದೂರಿನ ಮೇರೆಗೆ ಮಂಗಳವಾರ ನರಸಿಂಹರಾಜಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‍ಸ್ಪೆಕ್ಟರ್ ವಸಂತ್ ಶಂಕರ್ ಅವರು ಮುಸ್ತಫ್ ಅಲಿ ಅವರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈಎಸ್ಪಿ ದಾಳಿ ನಡೆಸಿದ್ದಾರೆ.
ಲಂಚದೊಂದಿಗೆ ಅಧಿಕಾರಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago