ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಸರ್ಕಲ್ ಇನ್‍ಸ್ಪೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪಟ್ಟಣದಲ್ಲಿ ವರದಿಯಾಗಿದೆ.
ನರಸಿಂಹರಾಜಪುರ ಸರ್ಕಲ್ ಇನ್‍ಸ್ಪೆಕ್ಟರ್ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಧಿಕಾರಿ ವಸಂತ್ ಶಂಕರ್ ಅವರು ಮುಸ್ತಫ್ ಅಲಿ ಎಂಬವರಿಗೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ ಮುಸ್ತಫ್ ಅಲಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರೆನ್ನಲಾಗಿದೆ.
ದೂರಿನ ಮೇರೆಗೆ ಮಂಗಳವಾರ ನರಸಿಂಹರಾಜಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‍ಸ್ಪೆಕ್ಟರ್ ವಸಂತ್ ಶಂಕರ್ ಅವರು ಮುಸ್ತಫ್ ಅಲಿ ಅವರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈಎಸ್ಪಿ ದಾಳಿ ನಡೆಸಿದ್ದಾರೆ.
ಲಂಚದೊಂದಿಗೆ ಅಧಿಕಾರಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…