ಬೆಂಗಳೂರು: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಆಡುಗೋಡಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪಶ್ಚಿಮ ಬಂಗಾಳದ ನಿವಾಸಿಗಳಾದ ಸುಮನ್ ಹಾಗೂ ಗುಲಾಲ್ ಸೇರಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜನವರಿ 28ರಂದು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದ ಸುಮನ್ ಮತ್ತು ಗುಲಾಲ್ ಎಂಬವರಿಗೆ 500 ಮುಖಬೆಲೆಯ ಖೋಟಾ ನೋಟುಗಳ ಒಟ್ಟು ರೂ. 1.5 ಲಕ್ಷ ಮೊತ್ತ ಲಭಿಸಿದೆ. ನಗರಕ್ಕೆ ಬಂದ ನಂತರ, ಅವರು ಈ ಹಣವನ್ನು ಊರಿಗೆ ಕಳುಹಿಸಲು ನಿರ್ಧರಿಸಿದರು.
ಈ ನಡುವೆ, ಮೊತ್ತದಲ್ಲಿ ರೂ. 70,000 ಹಣವನ್ನು ಕುಮಾರ್ ಎಂಬಾತನಿಗೆ ನೀಡುವ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸೂಚಿಸಿದರು. ಆದರೆ, ಕುಮಾರ್ ಹಣ ಎಣಿಸುತ್ತಿದ್ದಾಗ, ನೋಟುಗಳ ಸೀರಿಯಲ್ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅನುಮಾನ ಗೂಡಿತು. ತಕ್ಷಣವೇ ಅವರು ನೋಟುಗಳ ಪರಿಶೀಲನೆ ನಡೆಸಿದಾಗ, ಅವು ಖೋಟಾ ಎಂದು ದೃಢಪಟ್ಟಿತು.
ಈ ಬಗ್ಗೆ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ, ಪೊಲೀಸರು ಮೂವರನ್ನೂ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…