Categories: CorruptionLatest

ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಗೋಲ್ಮಾಲ್: ನಕಲಿ ಟೆಂಡರ್ ದಾಖಲೆ ಸೃಷ್ಟಿಸಿ ₹3.48 ಕೋಟಿ ವಂಚನೆ, PWD ಇಇ ವಿರುದ್ಧ ದೂರು

ಲೋಕೋಪಯೋಗಿ ಇಲಾಖೆ (PWD) ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಎಂದು ಹೇಳಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ (ಇಇ) ವೆಂಕಟೇಶ್ ಗಲಗ ವಿರುದ್ಧ ₹3.48 ಕೋಟಿ ಅಕ್ರಮ ಹಣ ವರ್ಗಾವಣೆ ಸಂಬಂಧ ಗಂಭೀರ ಆರೋಪಗಳು ಕೇಳಿಬಂದಿವೆ.

ಮಸ್ಕಿ–ಲಿಂಗಸುಗೂರು ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳು ಹಾಗೂ ನಕಲಿ ಟೆಂಡರ್ ಸೃಷ್ಟಿಸಿ ₹3 ಕೋಟಿ 48 ಲಕ್ಷ ಹಣವನ್ನು ಅಕ್ರಮವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಇಇ ವೆಂಕಟೇಶ್ ಗಲಗ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಮೂಲತಃ ಈ ರಸ್ತೆ ಕಾಮಗಾರಿಯ ಟೆಂಡರ್ ಅಮ್ಮಾಪುರ ಆ್ಯಂಡ್ ಕಂಪನಿಗೆ ಅಧಿಕೃತವಾಗಿ ಮಂಜೂರಾಗಿತ್ತು. ಆದರೆ, ಕಾಮಗಾರಿ ನಡೆಯುತ್ತಿದ್ದ ವೇಳೆ ಭೀಮಾಶಂಕರ ದೋರನಹಳ್ಳಿ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಈ ಪ್ರಕರಣದ ಕುರಿತು ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಲಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

13 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

15 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago