ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ನಡೆದ ಘಟನೆಯೊಂದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ತಮ್ಮ ಗುಂಪಿನೊಂದಿಗೆ ನಿಂತಿದ್ದರು. ಈ ವೇಳೆ, ಪಿಎಸ್‌ಐ ಗಾದಿಲಿಂಗಪ್ಪ ಸ್ಥಳಕ್ಕೆ ಆಗಮಿಸಿ ಅವರನ್ನು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಹನುಮಂತೇಗೌಡ ಅವಾಚ್ಯ ಶಬ್ದ ಬಳಸಿದರೆಂದು ಹೇಳಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡ ಪಿಎಸ್‌ಐ, ಅವರ ಕಪಾಳಕ್ಕೆ ಬಾರಿಸಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ, ಹನುಮಂತೇಗೌಡ ಕೂಡಲೇ ಪೊಲೀಸರು ವಶಕ್ಕೆ ಪಡೆದರು. ಹನುಮಂತೇಗೌಡ, ತನ್ನ ಮೇಲೆ ಪೊಲೀಸರಿಂದಲೇ ಹಲ್ಲೆಯಾಗಿದೆ ಎಂದು ಪ್ರತ್ಯುತ್ತರ ಆರೋಪ ಮಾಡಿ, ಎದೆ ನೋವಿನ ದೂರು ನೀಡಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಹಿಂದಿನ ವಿವರ: ಪರಸ್ಪರ ಆರೋಪಗಳು
ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಕಾರು ಚಾಲಕ ರಂಗಸ್ವಾಮಿ ಪ್ರಕಾರ, ಪಿಎಸ್‌ಐ ಗಾದಿಲಿಂಗಪ್ಪ ಅವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಅವರು ಏಕವಚನದಲ್ಲಿ ಮಾತನಾಡಿದರೆಂದು ಆರೋಪಿಸಿದ್ದಾರೆ. ಹನುಮಂತೇಗೌಡ ಗೌರವಯುತವಾಗಿ ಮಾತನಾಡಲು ಕೇಳಿದರೂ, ಪಿಎಸ್‌ಐ ಅವಾಚ್ಯ ಶಬ್ದ ಬಳಸಿದರೆಂದು ಹೇಳಿದ್ದಾರೆ. ಈ ಸಂಬಂಧ ನೂಕಾಟ-ತಳ್ಳಾಟ ನಡೆದು, ನಂತರ ಪಿಎಸ್‌ಐ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿಯಿಂದ ಕಠಿಣ ಪ್ರತಿಕ್ರಿಯೆ
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, “ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಚಿತ್ರದುರ್ಗದಲ್ಲಿ ಪಿಎಸ್‌ಐ ಗಾದಿಲಿಂಗಪ್ಪ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ,” ಎಂದು ಹೇಳಿದ್ದಾರೆ.
ಅಲ್ಲದೇ, ಈ ಘಟನೆ ರಾಜಕಾರಣ ಪ್ರೇರಿತ ಎಂದು ಆರೋಪಿಸಿರುವ ಅವರು, ಪಿಎಸ್‌ಐ ಗಾದಿಲಿಂಗಪ್ಪ ಅವರನ್ನು ತಕ್ಷಣ ಅಮಾನತು ಮಾಡಬೇಕು, ಇಲ್ಲದಿದ್ದರೆ ಬಿಜೆಪಿ ಹೋರಾಟ ಆರಂಭಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…