ಚಿಂಚೋಳಿ ತಾಲ್ಲೂಕಿನ ಕಸಬಾ ಹೋಬಳಿಗೆ ಸೇರಿದ ಮೈಲಾಂಡ್ಲಹಳ್ಳಿ ಗ್ರಾಮ ಕ್ರಾಸ್‌ನಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಕ್ಲಿನಿಕ್‌ನಲ್ಲಿ ಯಾವುದೇ ವೈದ್ಯಕೀಯ ಪರವಾನಗಿ ಇಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆಯಿಂದ ವೈದ್ಯೆ ರಮಾದೇವಿಯು ವೈದ್ಯಕೀಯ ವಿದ್ಯಾಭ್ಯಾಸದ ಪ್ರಮಾಣಪತ್ರ, ನೋಂದಣಿ ಹಾಗೂ ಕಾನೂನುಬದ್ಧ ಪರವಾನಗಿಯನ್ನು ಹೊಂದಿಲ್ಲವೆಂಬುದು ಬೆಳಕಿಗೆ ಬಂದಿದೆ.
ಕ್ಲಿನಿಕ್‌ನಲ್ಲಿ ಇಂಜೆಕ್ಷನ್, ಔಷಧಿ, ಚುಚ್ಚುಮದ್ದು ಹಾಗೂ ಹಲವಾರು ವೈದ್ಯಕೀಯ ಸಾಮಗ್ರಿಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಬಳಿಕ ಕ್ಲಿನಿಕ್‌ಗೆ ಬೀಗ ಹಾಕಲಾಗಿದ್ದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ, ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾರ್ವಜನಿಕರ ಆರೋಗ್ಯದೊಂದಿಗೆ ಆಟವಾಡುವ ನಕಲಿ ಚಿಕಿತ್ಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…