Latest

ದಾಖಲೆಗಳಿಲ್ಲದೆ ಕ್ಲಿನಿಕ್: ಮೈಲಾಂಡ್ಲಹಳ್ಳಿಯಲ್ಲಿ ಆರೋಗ್ಯ ಇಲಾಖೆಯ ದಾಳಿ, ವೈದ್ಯೆ ವಿರುದ್ಧ ಎಫ್‌ಐಆರ್

ಚಿಂಚೋಳಿ ತಾಲ್ಲೂಕಿನ ಕಸಬಾ ಹೋಬಳಿಗೆ ಸೇರಿದ ಮೈಲಾಂಡ್ಲಹಳ್ಳಿ ಗ್ರಾಮ ಕ್ರಾಸ್‌ನಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಕ್ಲಿನಿಕ್‌ನಲ್ಲಿ ಯಾವುದೇ ವೈದ್ಯಕೀಯ ಪರವಾನಗಿ ಇಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆಯಿಂದ ವೈದ್ಯೆ ರಮಾದೇವಿಯು ವೈದ್ಯಕೀಯ ವಿದ್ಯಾಭ್ಯಾಸದ ಪ್ರಮಾಣಪತ್ರ, ನೋಂದಣಿ ಹಾಗೂ ಕಾನೂನುಬದ್ಧ ಪರವಾನಗಿಯನ್ನು ಹೊಂದಿಲ್ಲವೆಂಬುದು ಬೆಳಕಿಗೆ ಬಂದಿದೆ.

ಕ್ಲಿನಿಕ್‌ನಲ್ಲಿ ಇಂಜೆಕ್ಷನ್, ಔಷಧಿ, ಚುಚ್ಚುಮದ್ದು ಹಾಗೂ ಹಲವಾರು ವೈದ್ಯಕೀಯ ಸಾಮಗ್ರಿಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಬಳಿಕ ಕ್ಲಿನಿಕ್‌ಗೆ ಬೀಗ ಹಾಕಲಾಗಿದ್ದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ, ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾರ್ವಜನಿಕರ ಆರೋಗ್ಯದೊಂದಿಗೆ ಆಟವಾಡುವ ನಕಲಿ ಚಿಕಿತ್ಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

19 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago