Latest

Ragging ಭೀತಿಗೆ ಕಾಲೇಜ್ ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, 22 ವರ್ಷದ ಅರ್ಚಿಟೆಕ್ಚರ್ ವಿದ್ಯಾರ್ಥಿ ಅರುಣ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೋಕ ಸಾದಗಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರ್ಯಾಗಿಂಗ್ ಭೀತಿಯಿಂದ ವಿದ್ಯಾರ್ಥಿ ಈ ಕೃತ್ಯ ಎಸಗಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಹಾಸನ ಜಿಲ್ಲೆ ಮೂಲದ ಚನ್ನಕೇಶವ ಮತ್ತು ತುಳಸಿ ದಂಪತಿಯ ಪುತ್ರನಾದ ಅರುಣ್, ಬೆಂಗಳೂರಿನ ಬಾಗಲೂರಿನ ಪ್ರತಿಷ್ಠಿತ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಉಚಿತ ಸೀಟ್‌ ಪಡೆಯುವ ಮೂಲಕ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸಿದ್ದ ಅರುಣ್, ತನ್ನ ಸಾಧನೆಗಾಗಿ ಕಾಲೇಜಿನಲ್ಲಿ ಟಾಪರ್‌ನಾಗಿದ್ದಾನೆ. ಕುಟುಂಬದ ಆರ್ಥಿಕ ಹಿನ್ನಲೆಯಲ್ಲಿ ಕೂಲಿ ಕೆಲಸ ಮಾಡುವ ಪೋಷಕರು ಮಗನ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯಿಂದ ಸಹಕಾರ ನೀಡಿದ್ದರು.

ಜುಲೈ 10ರಂದು ಅರುಣ್ ತನ್ನ ಗೃಹಕ್ಕೆ ಬಂದು, ಜುಲೈ 11ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮೊದಲು, ತನ್ನ ಮೇಲೆ ನಡೆದಿದ್ದ ರ್ಯಾಗಿಂಗ್‌ ಕುರಿತು ವಿಡಿಯೋ ಸಂದೇಶವೊಂದನ್ನು ಸೆಲ್ಫಿಯಾಗಿ ಮಾಡಿದ್ದಾನೆ. ಈ ವಿಡಿಯೋ ನಂತರವೇ ಆತನ ಆತ್ಮಹತ್ಯೆ ಬೆಳಕಿಗೆ ಬಂದಿದೆ.

ಅರುಣ್ ಮಾಡಿದ ಸೆಲ್ಫಿ ವೀಡಿಯೋ, ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ವೈರಲ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೇ ಕಾಲೇಜು ಆಡಳಿತಮಂಡಳಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ರು. ಆದರೆ ಮನೆಗೆ ಪೋಷಕರು ಬಂದಾಗ, ಅರುಣ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆಯಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಯ ಮರಣದಿಂದ ಕುಟುಂಬ ಹಾಗೂ ಶೈಕ್ಷಣಿಕ ವಲಯದಲ್ಲಿ ದುಗುಡ ಮೂಡಿದೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣವಾದವರು ಯಾರಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

1 hour ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

2 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

2 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

2 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

22 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago