ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಲೋಕಾಯುಕ್ತ ಪೊಲೀಸರು ಹುಬ್ಬಳ್ಳಿಯಲ್ಲಿ ಮಿಂಚಿನ ದಾಳಿ ನಡೆಸಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಡೆ ಅವರನ್ನು ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.
ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ₹6 ಲಕ್ಷ ಲಂಚ ಪಡೆಯುವಾಗಲೇ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. 2019ರಲ್ಲಿ ಖರೀದಿಸಿದ್ದ ಎಂಟು ಟಿಪ್ಪರ್ ವಾಹನಗಳಿಗೆ ಸಂಬಂಧಿಸಿದಂತೆ ಸುಮಾರು ₹60 ಲಕ್ಷ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಭ್ಯವಾಗಿದ್ದು, ಅದರಲ್ಲಿಂದ ₹34 ಲಕ್ಷ ಪಡೆದಿದ್ದ ವಿಶ್ವಜಿತ್ ವಿರುದ್ಧ ಇಲಾಖೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.
ಈ ಪ್ರಕರಣದಲ್ಲಿ ಸಹಾಯ ಮಾಡುವ ನೆಪದಲ್ಲಿ ಭರತ್ ಕುಮಾರ್ ಹೆಗ್ಡೆ ಅವರು ಹಲವು ಬಾರಿ ವಿಚಾರಣೆಗೆ ಕರೆಯಿಸಿ, “ಪ್ರಕರಣ ಮುಚ್ಚಲು ಹಣ ತರಬೇಕು” ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ನಿರಾಕರಿಸಿದ ವಿಶ್ವಜಿತ್ ನಾಯಕ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ಆಧರಿಸಿ ರೂಪಿಸಿದ ಉರುಳಿಗೆ ತಕ್ಕಂತೆ, ಇಂದು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ತಂಡ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದೆ. ಅವರಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ ದೇವರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿಗಳಾದ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ರಾಜು ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು ನಗರದ ಯಲಹಂಕ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 350 ಅಡುಗೆ ಅನಿಲ ಸಿಲಿಂಡರ್‌ಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ ಪ್ರಕರಣಕ್ಕೆ ಹೊಸ ತಿರುವು…
ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ…
ಬೆಂಗಳೂರು ನಗರದಲ್ಲಿ ಪತ್ನಿಯ ಮಾನಸಿಕ ಹಾಗೂ ಲೈಂಗಿಕ ಕಿರುಕುಳದಿಂದ ಬೇಸತ್ತ ಪತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ.…
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಪಿಂಜಾರ್ ಹೆಗ್ಡಾಳ್ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಕೆಕೆಆರ್‌ಟಿಸಿ ಬಸ್ ಅಪಘಾತಕ್ಕೀಡಾದರೂ, ದೊಡ್ಡ…
ಗುಜರಾತ್‌ನ ಪಾಲನ್‌ಪುರದಲ್ಲಿ ಮಹಿಳೆಯೊಬ್ಬಳನ್ನು ಆಕೆಯೇ ವಿಶ್ವಾಸಿಸಿದ್ದ ಮಾಜಿ ಕೆಲಸದಾಕೆ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶಾಂತಿಬೆನ್…
ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ರೌಡಿ ಶೀಟರ್ ಪಟ್ಟಿಯಲ್ಲಿರುವ ಮಹಿಳೆಗೆ ಅಶ್ಲೀಲ ಸಂದೇಶಗಳನ್ನು…