Categories: CorruptionLatest

6 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ವಾಣಿಜ್ಯ ತೆರಿಗೆ ಡಿಸಿ: ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಲೋಕಾಯುಕ್ತ ಪೊಲೀಸರು ಹುಬ್ಬಳ್ಳಿಯಲ್ಲಿ ಮಿಂಚಿನ ದಾಳಿ ನಡೆಸಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಡೆ ಅವರನ್ನು ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.

ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ₹6 ಲಕ್ಷ ಲಂಚ ಪಡೆಯುವಾಗಲೇ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. 2019ರಲ್ಲಿ ಖರೀದಿಸಿದ್ದ ಎಂಟು ಟಿಪ್ಪರ್ ವಾಹನಗಳಿಗೆ ಸಂಬಂಧಿಸಿದಂತೆ ಸುಮಾರು ₹60 ಲಕ್ಷ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಭ್ಯವಾಗಿದ್ದು, ಅದರಲ್ಲಿಂದ ₹34 ಲಕ್ಷ ಪಡೆದಿದ್ದ ವಿಶ್ವಜಿತ್ ವಿರುದ್ಧ ಇಲಾಖೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.

ಈ ಪ್ರಕರಣದಲ್ಲಿ ಸಹಾಯ ಮಾಡುವ ನೆಪದಲ್ಲಿ ಭರತ್ ಕುಮಾರ್ ಹೆಗ್ಡೆ ಅವರು ಹಲವು ಬಾರಿ ವಿಚಾರಣೆಗೆ ಕರೆಯಿಸಿ, “ಪ್ರಕರಣ ಮುಚ್ಚಲು ಹಣ ತರಬೇಕು” ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ನಿರಾಕರಿಸಿದ ವಿಶ್ವಜಿತ್ ನಾಯಕ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಆಧರಿಸಿ ರೂಪಿಸಿದ ಉರುಳಿಗೆ ತಕ್ಕಂತೆ, ಇಂದು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ತಂಡ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದೆ. ಅವರಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ ದೇವರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿಗಳಾದ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ರಾಜು ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

1 day ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

1 day ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago