
ನಂಜನಗೂಡು : ನಂಜನಗೂಡು ತಾಲೂಕು ಕಚೇರಿಯಲ್ಲಿ ಹತ್ತಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ಸಾರ್ವಜನಿಕರು ದೂರು ನೀಡಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟು ಮಾಡುವುದು ಹಾಗೂ ಬೆದರಿಕೆ ಹಾಕುತ್ತಾರೆ ಎಂದು ದೂರು ಸಲ್ಲಿಸಿರುವ ಹಿನ್ನಲೆ ಮೈಸೂರು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಸಂಭಂಧ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿಗೆ ಪತ್ರ ರವಾನೆ ಆಗಿದ್ದು ಅಗತ್ಯ ಕ್ರಮ ಕೈಗೊಂಡು ದೂರುದಾರರಿಗೆ ಮಾಹಿತಿ ನಂತರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆದರೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪತ್ರ ರವಾನೆ ಆಗಿ ಒಂದು ತಿಂಗಳು ಕಳೆದರೂ ಸಹ ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ತೋರಿರುವ ಕಿರಣ್ ಕುಮಾರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಇದೆ.ಜಿಲ್ಲಾಧಿಕಾರಿಗಳ ಪತ್ರಕ್ಕೆ ಮನ್ನಣೆ ನೀಡದಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.
ಈ ವಿಚಾರವಾಗಿ ನಂಜನಗೂಡಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಕೂಡಲೇ ಈ ವಿಚಾರವನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗುತ್ತೇವೆ ನಂಜನಗೂಡಿನ ತಾಲೂಕು ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳು ಕೇಳಿಬರುತ್ತದೆ ಜನತಾದರ್ಶನ ಕಾರ್ಯಕ್ರಮದಲ್ಲಿಯೂ ಕೂಡ ಸಾರ್ವಜನಿಕರಿಂದ ಅಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ವಿರುದ್ಧ ಸಾಕಷ್ಟು ದೂರುಗಳು ಕೇಳಿಬರುತ್ತವೆ ಇದನ್ನು ಸೂಕ್ಷ್ಮವಾಗಿ ಗಮನಿಸಿ ಹತ್ತಾರು ವರ್ಷಗಳಿಂದ ಜಾಂಡ ಹೂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ. ಜಿಲ್ಲಾಧಿಕಾರಿಗಳು ಉಪಯೋಗ ಅಧಿಕಾರಿಗೆ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದರು ಯಾಕಾಗಿ ಕ್ರಮ ಆಗಿಲ್ಲ ಎಂಬುದನ್ನು ಕೂಡ ನಾನು ತಿಳಿದುಕೊಳ್ಳುತ್ತೇನೆ ಸಾರ್ವಜನಿಕರ ಕೆಲಸ ಕಾರ್ಯ ಮಾಡಿದೆ ಕಾಲಹರಣ ಮಾಡುವ ಸಿಬ್ಬಂದಿಗಳ ವಿರುದ್ಧ ಈಗಾಗಲೇ ಮಾಹಿತಿ ಕಲೆ ಹಾಕಿದ್ದೇವೆ ಹತ್ತಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಇರುವವರನ್ನು ಪಟ್ಟಿ ಮಾಡಿ ಅಂಥವರನ್ನ ತಾಲೂಕಿನಿಂದ ವರ್ಗಾವಣೆಗೊಳಿಸಲು ಮತ್ತು ಸಾರ್ವಜನಿಕರ ಜೊತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಾವು ಮುಂದಾಗುತ್ತೇವೆ ಎಂದು ಕೆಡಿಪಿ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.