ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ದಿಲೀಷ್ ಶಶಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬಾಚಣಕಿ ಜಲಾಶಯಕ್ಕೆ ಭೇಟಿ ನೀಡಿದ ಸಿಇಒ ಅವರು, ಯೋಜನೆಯಡಿ ಪ್ರಗತಿಯಲ್ಲಿರುವ ಇನ್‌ಟೇಕ್ ವೆಲ್, ಜಾಕ್‌ವೆಲ್, ಅಪ್ರೋಚ್ ಬ್ರಿಡ್ಜ್, ನೀರು ಶುದ್ಧೀಕರಣ ಘಟಕ (WTP), ಎಂ.ಬಿ.ಟಿ., ಓವರ್‌ಹೆಡ್ ಟ್ಯಾಂಕ್ (OHT) ಹಾಗೂ ಪೈಪ್‌ಲೈನ್ ಕಾಮಗಾರಿಗಳ ಸ್ಥಿತಿಗತಿಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ಇದೇ ವೇಳೆ ಯೋಜನೆಯ ಕೀ ಮ್ಯಾಪ್ ವೀಕ್ಷಿಸಿ, ಕಾಮಗಾರಿಗಳ ಪ್ರಸ್ತುತ ಪ್ರಗತಿ, ಬಾಕಿ ಉಳಿದಿರುವ ಕೆಲಸಗಳು ಹಾಗೂ ಅನುಷ್ಠಾನದ ಹಂತಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಯೋಜನೆಯಡಿ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಮಾರ್ಚ್ ತಿಂಗಳ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು. ಕಾಮಗಾರಿ ಪೂರ್ಣಗೊಂಡ ಬಳಿಕ ಯೋಜನೆಯ ಉದ್ದೇಶಕ್ಕೆ ಅನುಗುಣವಾಗಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಸಮರ್ಪಕವಾಗಿ ಹಾಗೂ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಅಗತ್ಯ ಸಿದ್ಧತೆ ಮತ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯಾಗಿರುವುದರಿಂದ ಕಾಮಗಾರಿಯ ಗುಣಮಟ್ಟದ ಜೊತೆಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವುದಕ್ಕೂ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮುಂಡಗೋಡ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜೇಶ್ವರಿ ಕದಂ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…
ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…
ಕೌಟುಂಬಿಕ ಕಲಹಕ್ಕೆ ಏಳು ಜೀವಗಳ ಬಲಿ; ಕ್ಯಾಬ್ ಚಾಲಕ ಇಂದುಶೇಖರ್ ಬಂಧನ, ವಿಚಾರಣೆಯಲ್ಲಿ ಬಯಲಾಯ್ತು ನರಮೇಧದ ರಹಸ್ಯ ಬೆಂಗಳೂರು: ಸಿಲಿಕಾನ್…
ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ…
ಅಂಗಡಿಗಳು, ನಂದಿನಿ ಬೂತ್, ಪಾರ್ಲರ್‌ಗಳೇ ಕಳ್ಳರ ಟಾರ್ಗೆಟ್ – ರಾತ್ರಿ ಗಸ್ತು ಹೆಚ್ಚಿಸಲು ಸ್ಥಳೀಯರ ಆಗ್ರಹ ಗೌರಿಬಿದನೂರು: ನಗರದ ಪ್ರಶಾಂತ್…