
ಮಂಗಳೂರು: ನಗರದ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್‌ನೊಬ್ಬನನ್ನು ಬಂಧಿಸಲಾಗಿದೆ.
ಬಂಧಿತನನ್ನು ಚಂದ್ರನಾಯಕ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಪೊಲೀಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಮಹಿಳೆಯೊಬ್ಬರು ನೀಡಿದ ದೂರು ಆಧಾರದ ಮೇಲೆ ಕಂಕನಾಡಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೆತ್ತಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಆರೋಪಿ ತನ್ನ ಹುದ್ದೆಯ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ನೊಂದಿಸಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರ ಬರುವ ಸಾಧ್ಯತೆ ಇದೆ.
ಈ ಘಟನೆ ಪೊಲೀಸರ ಮೇಲೆ ಜನರಲ್ಲಿ ಆಕ್ರೋಶ ಮತ್ತು ನಿರಾಸೆ ಮೂಡಿಸಿರುವಂತೆ ಕಂಡುಬರುತ್ತಿದ್ದು, ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆಗಾಗಿ ಭರವಸೆ ನೀಡಿದ್ದಾರೆ.
(ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ)