ಕಲಬುರಗಿ: ನಗರದ ಜಗತ್ ವೃತ್ತದ ಬಳಿ ಬುಧವಾರ ನಡೆದ ದುರ್ಘಟನೆಯೊಂದು ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ನಗರ ಪ್ರವಾಸದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಸಿಎಆರ್ (CAR) ಕಾನ್ಸ್ಟೇಬಲ್ ಶಿವಕುಮಾರ ಅವರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶಿವಕುಮಾರ (ತಂದೆ: ಶರಣಪ್ಪ ಮಾವನೂರ) ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿದ್ದರು. ಕರ್ತವ್ಯದಲ್ಲಿದ್ದ ವೇಳೆ ಸಿಎಆರ್ ವಾಹನದಲ್ಲಿದ್ದ .303 ರೈಫಲ್‌ನಿಂದ ಎದೆಗೆ ಗುಂಡು ಹೊಡೆದುಕೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Related News

error: Content is protected !!