ಕಲಬುರಗಿ: ನಗರದ ಜಗತ್ ವೃತ್ತದ ಬಳಿ ಬುಧವಾರ ನಡೆದ ದುರ್ಘಟನೆಯೊಂದು ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ನಗರ ಪ್ರವಾಸದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಸಿಎಆರ್ (CAR) ಕಾನ್ಸ್ಟೇಬಲ್ ಶಿವಕುಮಾರ ಅವರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶಿವಕುಮಾರ (ತಂದೆ: ಶರಣಪ್ಪ ಮಾವನೂರ) ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿದ್ದರು. ಕರ್ತವ್ಯದಲ್ಲಿದ್ದ ವೇಳೆ ಸಿಎಆರ್ ವಾಹನದಲ್ಲಿದ್ದ .303 ರೈಫಲ್‌ನಿಂದ ಎದೆಗೆ ಗುಂಡು ಹೊಡೆದುಕೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…