Latest

ಮಲಮಗ, ಪತಿಯ ಸ್ನೇಹಿತರ ನಿರಂತರ ಅತ್ಯಾಚಾರ: ರಾಷ್ಟ್ರಪತಿ ಬಳಿ ದಯಾಮರಣ ಕೋರಿದ ಮಹಿಳೆ

ಮಲ ಮಗ ಮತ್ತು ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರಕ್ಕೊಳಗಾಗಿರುವ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ‘ದಯಾಮರಣ’ಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ.
ಮೊದಲ ಪತಿಯಿಂದ ವಿಚ್ಛೇದನ ಪಡೆದ ಬಳಿಕ ಚಂಡೀಗಢದ 55 ವರ್ಷದ ವಿಚ್ಛೇದಿತ ರೈತನೊಬ್ಬನನ್ನು ವಿವಾಹವಾಗಿರುವುದಾಗಿ ಮಹಿಳೆ ಹೇಳಿದ್ದಾರೆ.
ನನ್ನ ಮಲಮಗ ನನ್ನೊಂದಿಗೆ ಲೈಂಗಿಕ ಸಂಪರ್ಕ ಬಯಸಿದ್ದ. ಪದೇ ಪದೆ ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ.
ವಿಷಯ ಬಹಿರಂಗಪಡಿಸಿದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತ ನನ್ನನ್ನು ಹೆದರಿಸಿದ್ದ. ಹೀಗಾಗಿ ಆರಂಭದಲ್ಲಿ ನಾನು ಸುಮ್ಮನಿರಲೇಬೇಕಾಯಿತು. ನಾನು ಗರ್ಭಿಣಿಯಾದೆ. ಡಿಎನ್‌ಎ ಪರೀಕ್ಷೆಗೆ ಹೋಗಲು ಬಯಸಿದಾಗ ನನ್ನ ಹೊಟ್ಟೆಗೆ ನಿಷ್ಕರುಣೆಯಿಂದ ಹೊಡೆಯಲಾಯಿತು. ನಂತರ, ಪುರನ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ನನಗೆ ಬಲವಂತವಾಗಿ ಗರ್ಭಪಾತ ಮಾಡಿಸಲಾಯಿತು ಎಂದು ಆಕೆ ಹೇಳಿದ್ದಾರೆ.
ಜುಲೈ 18 ರಂದು ಪತಿಯ ಸ್ನೇಹಿತನ ಫಾರ್ಮ್‌ಹೌಸ್‌ಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ಸಂಬಂಧಿಕರೊಬ್ಬರು ಮತ್ತು ಇಬ್ಬರು ಸಹೋದ್ಯೋಗಿಗಳು ನನ್ನ ಮೇಲೆ ಅತ್ಯಾಚಾರ ಎಸಗಿದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಯಿತಾದರೂ ಅವರು ಕಿವಿಗೊಡಲೇ ಇಲ್ಲ ಎಂದು ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂತರ ನ್ಯಾಯಾಲಯಕ್ಕೆ ಹೋಗಿ ಎಫ್‌ಐಆರ್‌ ದಾಖಲಾಗುವಂತೆ ಮಾಡಲಾಯಿತು. ಇತ್ತೀಚೆಗಷ್ಟೇ ಪುರನ್‌ಪುರ್ ಕೊತ್ವಾಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪತಿ ಮತ್ತು ಮಲಮಗ ಸೇರಿದಂತೆ ಐವರ ವಿರುದ್ಧ ಐಪಿಸಿ ಸೆಕ್ಷನ್ 376-ಡಿ (ಗ್ಯಾಂಗ್-ರೇಪ್), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಯಾವುದೇ ಬಂಧನವಾಗಿಲ್ಲ ಎಂದು ಆಕೆ ವಿವರಿಸಿದ್ದಾರೆ.
ಅವರಿಂದ ನನಗೆ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತಿದೆ. ನನ್ನ ಮೇಲಿನ ದೌರ್ಜನ್ಯದ ಬಗ್ಗೆ ಮೌನವಾಗಿರುವಂತೆ ಹೆದರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
‘ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ನ್ಯಾಯ ಸಿಗುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಆದ್ದರಿಂದ, ರಾಷ್ಟ್ರಪತಿ ಅನುಮತಿಯೊಂದಿಗೆ ನನ್ನ ಜೀವನವನ್ನು ಅಂತ್ಯಗೊಳಿಸುತ್ತೇನೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಮಹಿಳೆ ಪ್ರಸ್ತುತ ತಾಯಿ, ಸಹೋದರ ಮತ್ತು ಆರು ವರ್ಷದ ಮಗನೊಂದಿಗೆ ಬರೇಲಿಯಲ್ಲಿ ವಾಸವಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago