ಕಲಬುರಗಿ: ಕಾನೂನಿನ ರಕ್ಷಕನೆಂದು ಭಾವಿಸಿದ ವಕೀಲನೇ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಕ್ಷಿದಾರೆಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪದಲ್ಲಿ ವಕೀಲ ಮಲ್ಲಿನಾಥ ನರೋಣಿಯನ್ನು ಮಹಿಳಾ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೀಡಿತೆಯ ದೂರಿನ ಪ್ರಕಾರ, ಒಂದು ವರ್ಷದ ವೈವಾಹಿಕ ಜೀವನದ ನಂತರ ಪತಿ ಜೊತೆ ಕಲಹ ಉಂಟಾಗಿ, ಆಕೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲಿನಾಥ ನರೋಣಿ ಆಕೆಯ ಪರವಾಗಿ ವಕಾಲತ್ತು ವಹಿಸಿದ್ದರು. ಕೇಸಿನ ವಿಚಾರಣೆ ಹೆಸರಿನಲ್ಲಿ ಕರೆಸಿಕೊಂಡು, ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಖಾಸಗಿ ಮಾಹಿತಿಯನ್ನು ದುರುಪಯೋಗಪಡಿಸಿ ಬೆದರಿಸುತ್ತಿದ್ದರೆಂದು ಮಹಿಳೆ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ವಕೀಲನ ಪತ್ನಿ ಹಾಗೂ ಪುತ್ರನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಸಂಬಂಧಿತ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಮುಂದುವರಿದಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

Related News

error: Content is protected !!