ಕಲಬುರಗಿ: ಕಾನೂನಿನ ರಕ್ಷಕನೆಂದು ಭಾವಿಸಿದ ವಕೀಲನೇ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಕ್ಷಿದಾರೆಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪದಲ್ಲಿ ವಕೀಲ ಮಲ್ಲಿನಾಥ ನರೋಣಿಯನ್ನು ಮಹಿಳಾ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೀಡಿತೆಯ ದೂರಿನ ಪ್ರಕಾರ, ಒಂದು ವರ್ಷದ ವೈವಾಹಿಕ ಜೀವನದ ನಂತರ ಪತಿ ಜೊತೆ ಕಲಹ ಉಂಟಾಗಿ, ಆಕೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲಿನಾಥ ನರೋಣಿ ಆಕೆಯ ಪರವಾಗಿ ವಕಾಲತ್ತು ವಹಿಸಿದ್ದರು. ಕೇಸಿನ ವಿಚಾರಣೆ ಹೆಸರಿನಲ್ಲಿ ಕರೆಸಿಕೊಂಡು, ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಖಾಸಗಿ ಮಾಹಿತಿಯನ್ನು ದುರುಪಯೋಗಪಡಿಸಿ ಬೆದರಿಸುತ್ತಿದ್ದರೆಂದು ಮಹಿಳೆ ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ವಕೀಲನ ಪತ್ನಿ ಹಾಗೂ ಪುತ್ರನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಸಂಬಂಧಿತ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಮುಂದುವರಿದಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…