Categories: LatestPolitics

ಶೋಭಕ್ಕ, ಬಿಡದಿ ಟೌನ್‌ಶಿಪ್‌ಗೆ ಟೆಂಡರ್ ಕರೆದಿದ್ದು ನಿಮ್ಮ ಯಜಮಾನ’ ಹೇಳಿಕೆ ವಿವಾದ: ನೋವಾಗಿದ್ದರೆ ಸಂಪೂರ್ಣ ವಿಷಾದ ಎಂದ ಶಾಸಕ ಎಚ್.ಸಿ. ಬಾಲಕೃಷ್ಣ

ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ತಮ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಸಂಪೂರ್ಣ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತಾವು ಸದಾ ಗೌರವದಿಂದ “ಶೋಭಕ್ಕ” ಎಂದು ಸಂಬೋಧಿಸಿದ್ದೇನೆ ಎಂದು ಹೇಳಿದರು. ಬಿಡದಿ ಟೌನ್‌ಶಿಪ್ ಯೋಜನೆಗೆ 2010ರಲ್ಲಿ ಟೆಂಡರ್ ಕರೆಯಲಾಗಿತ್ತು. ಆ ಸಂದರ್ಭದಲ್ಲಿ ರಾಜಕೀಯ ಹಿನ್ನೆಲೆಯ ಉಲ್ಲೇಖವಾಗಿ “ನಿಮ್ಮ ಸಾಹೇಬ”, “ನಿಮ್ಮ ಯಜಮಾನ” ಎಂಬ ಪದಗಳನ್ನು ಬಳಸಿದ್ದೇನೆ ಎಂದು ವಿವರಿಸಿದರು.

ಶೋಭಾ ಕರಂದ್ಲಾಜೆ ಅವರನ್ನು ಸಾಮಾನ್ಯ ಕಾರ್ಯಕರ್ತೆಯಾಗಿ ಗುರುತಿಸಿ, ಸಚಿವೆಯನ್ನಾಗಿ ಬೆಳೆಸಿದ ನಾಯಕ ಬಿ.ಎಸ್. ಯಡಿಯೂರಪ್ಪ ಎಂಬ ರಾಜಕೀಯ ಸಂದರ್ಭವನ್ನು ಉಲ್ಲೇಖಿಸುವ ಉದ್ದೇಶದಿಂದ ಮಾತ್ರ ಆ ಪದಗಳನ್ನು ಬಳಸಿದ್ದೇನೆ. ಯಾವುದೇ ವೈಯಕ್ತಿಕ ಅವಹೇಳನ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು.

ಸಾರ್ವಜನಿಕ ಜೀವನದಲ್ಲಿರುವವರು ಹೇಳಿಕೆಗಳ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು. ಆದಾಗ್ಯೂ, ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದರು.

ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸುದ್ದಿಗೋಷ್ಠಿಯಲ್ಲಿ ಶೋಭಾ ಕರಂದ್ಲಾಜೆ ಅವರ ಬಗ್ಗೆ ಬಳಸಿದ ಭಾಷೆ ಅಸಭ್ಯತೆಯ ಪರಮಾವಧಿಯಾಗಿದ್ದು, ಅದು ಮಹಿಳೆಯರಿಗೆ ಅಗೌರವ ತೋರುವ ಕಾಂಗ್ರೆಸ್‌ನ ನಿಜವಾದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದರು.

ಮಹಿಳಾ ಜನಪ್ರತಿನಿಧಿಯೊಬ್ಬರ ಕುರಿತು ಏಕವಚನದಲ್ಲಿ ಸಂವೇದನಾರಹಿತವಾಗಿ ಮಾತನಾಡಿರುವುದು ಖಂಡನೀಯ. ಬಾಲಕೃಷ್ಣ ಅವರು ಮಹಿಳಾ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

22 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

22 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

22 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago