ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯಾಯಾಲಯದ ಹೆಚ್ಚುವರಿ ಸಹಾಯಕ ಸಾರ್ವಜನಿಕ ಅಭಿಯೋಜಕ (ಎಪಿಪಿ) ಪ್ರಕಾಶ್ ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸೀಜ್ ಮಾಡಲಾಗಿದ್ದ ಮುದ್ದೆ ಮಾಲವನ್ನು ಬಿಡುಗಡೆ ಮಾಡಿಸಲೆಂದು ₹6,000 ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.
ಶಿರಸಿ ನಿವಾಸಿ ಪವನ್ ಕುಮಾರ್ ತಮ್ಮ ಸೀಜ್ ಆಗಿದ್ದ ವಸ್ತುಗಳನ್ನು ಬಿಡುಗಡೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಪ್ರಕಾಶ್ ಲಮಾಣಿ prakash Lamani ಅವರು ಪರವಾನಗಿಯನ್ನು ಸುಲಭವಾಗಿ ಒದಗಿಸಿಕೊಡಬಹುದು ಎಂದು ಭರವಸೆ ನೀಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬಗ್ಗೆ ಪವನ್ ಕುಮಾರ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ದೂರು ಆಧಾರದ ಮೇಲೆ, ಫೆಬ್ರವರಿ 28 ರಂದು ವಿಶೇಷ ಕಾರ್ಯಾಚರಣೆ ರೂಪಿಸಲಾಯಿತು. ಪವನ್ ಕುಮಾರ್ ಅವರು ಲಂಚದ ಹಣ ನೀಡುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಅವರ ತಂಡ ದಾಳಿ ನಡೆಸಿ ಪ್ರಕಾಶ್ ಲಮಾಣಿ ಅವರನ್ನು ಬಂಧಿಸಿದರು.
ಬಂಧನದ ನಂತರ ಲಮಾಣಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ಮುಂದುವರಿಸಲಾಗುತ್ತಿದೆ. ಜನಸಾಮಾನ್ಯರು ಈ ರೀತಿಯ ಅಕ್ರಮಗಳ ವಿರುದ್ಧ ಜಾಗೃತರಾಗಬೇಕು ಮತ್ತು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…