Latest

6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯಾಯಾಲಯದ ಹೆಚ್ಚುವರಿ ಸಹಾಯಕ ಸಾರ್ವಜನಿಕ ಅಭಿಯೋಜಕ (ಎಪಿಪಿ) ಪ್ರಕಾಶ್ ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸೀಜ್ ಮಾಡಲಾಗಿದ್ದ ಮುದ್ದೆ ಮಾಲವನ್ನು ಬಿಡುಗಡೆ ಮಾಡಿಸಲೆಂದು ₹6,000 ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.

ಶಿರಸಿ ನಿವಾಸಿ ಪವನ್ ಕುಮಾರ್ ತಮ್ಮ ಸೀಜ್ ಆಗಿದ್ದ ವಸ್ತುಗಳನ್ನು ಬಿಡುಗಡೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಪ್ರಕಾಶ್ ಲಮಾಣಿ prakash Lamani  ಅವರು ಪರವಾನಗಿಯನ್ನು ಸುಲಭವಾಗಿ ಒದಗಿಸಿಕೊಡಬಹುದು ಎಂದು ಭರವಸೆ ನೀಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬಗ್ಗೆ ಪವನ್ ಕುಮಾರ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ದೂರು ಆಧಾರದ ಮೇಲೆ, ಫೆಬ್ರವರಿ 28 ರಂದು ವಿಶೇಷ ಕಾರ್ಯಾಚರಣೆ ರೂಪಿಸಲಾಯಿತು. ಪವನ್ ಕುಮಾರ್ ಅವರು ಲಂಚದ ಹಣ ನೀಡುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಅವರ ತಂಡ ದಾಳಿ ನಡೆಸಿ ಪ್ರಕಾಶ್ ಲಮಾಣಿ ಅವರನ್ನು ಬಂಧಿಸಿದರು.

ಬಂಧನದ ನಂತರ ಲಮಾಣಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ಮುಂದುವರಿಸಲಾಗುತ್ತಿದೆ. ಜನಸಾಮಾನ್ಯರು ಈ ರೀತಿಯ ಅಕ್ರಮಗಳ ವಿರುದ್ಧ ಜಾಗೃತರಾಗಬೇಕು ಮತ್ತು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

10 minutes ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

4 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

7 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

12 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago