Categories: CorruptionLatest

ಭ್ರಷ್ಟ ಡಿಎಸ್‌ಪಿ ಕಪ್ಪು ಸಾಮ್ರಾಜ್ಯ ಬಯಲು: ₹200 ಕೋಟಿ ಅಕ್ರಮ ಆಸ್ತಿ, 50 ಎಕರೆ ಜಮೀನು ಪತ್ತೆ

ಹೈದರಾಬಾದ್: ತೆಲಂಗಾಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯ ಡಿಎಸ್‌ಪಿಯೊಬ್ಬರ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಬಯಲಾಗಿದೆ. ಹೈದರಾಬಾದ್ ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಸಂಕೀರೆಡ್ಡಿ ಭೀಮ್ ರೆಡ್ಡಿ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜುಲೈ 2ರಂದು ಏಕಕಾಲದಲ್ಲಿ 16 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.

ಭೀಮ್ ರೆಡ್ಡಿ ಅವರ ನಿವಾಸ, ಕಚೇರಿ, ಸ್ನೇಹಿತರ ಮನೆಗಳು ಹಾಗೂ ಬೇನಾಮಿ ಆಸ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಮಾರ್ಗಗಳಿಂದ ಅಪಾರ ಪ್ರಮಾಣದ ಆಸ್ತಿ ಸಂಪಾದಿಸಿರುವುದನ್ನು ಪತ್ತೆಹಚ್ಚಿದ್ದಾರೆ.

ಶೋಧದ ವೇಳೆ ಸುಮಾರು ₹200 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಹೈದರಾಬಾದ್‌ನ ಗಚಿಬೌಲಿ, ಮಣಿಕೊಂಡ, ಇಬ್ರಾಹಿಂಬಾಗ್ ಹಾಗೂ ತೆಲ್ಲಾಪುರದಂತಹ ದುಬಾರಿ ಪ್ರದೇಶಗಳಲ್ಲಿ ಐಷಾರಾಮಿ ವಿಲ್ಲಾಗಳು, ಹಲವು ಫ್ಲಾಟ್‌ಗಳು, ಜಿ+2 ಪೆಂಟ್‌ಹೌಸ್ ಹಾಗೂ ಸುಮಾರು 3,000 ಚದರ ಅಡಿ ವಾಣಿಜ್ಯ ಕಟ್ಟಡದ ದಾಖಲೆಗಳು ಸಿಕ್ಕಿವೆ.

ಇದಲ್ಲದೆ, ಹೈದರಾಬಾದ್ ಸುತ್ತಮುತ್ತ ಹಲವು ಓಪನ್ ಪ್ಲಾಟ್‌ಗಳ ಜೊತೆಗೆ ಕರ್ನಾಟಕದಲ್ಲಿ 44 ಎಕರೆ ಹಾಗೂ ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ 1 ಎಕರೆ ಸೇರಿದಂತೆ ಒಟ್ಟು 50 ಎಕರೆಗೂ ಅಧಿಕ ಕೃಷಿ ಭೂಮಿಯ ದಾಖಲೆಗಳು ಅಧಿಕಾರಿಗಳ ಕೈ ಸೇರಿವೆ. ಶೋಧದ ವೇಳೆ ಕೆಜಿಗಟ್ಟಲೆ ಚಿನ್ನ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಡಿಎಸ್‌ಪಿ ಸಂಕೀರೆಡ್ಡಿ ಭೀಮ್ ರೆಡ್ಡಿ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಈ ಬೃಹತ್ ಅಕ್ರಮ ಆಸ್ತಿ ಪ್ರಕರಣ ತೆಲಂಗಾಣ ಪೊಲೀಸ್ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

14 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

14 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

14 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

14 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

14 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

14 hours ago