ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆ ಮಾಡಲು ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಲಂಚ ಕೇಳಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗದ ಬುಕ್ಲಾಪುರದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಸ್ಮಶಾನವೊಂದರಲ್ಲಿ ಕಾಮಗಾರಿ ನಡೆಸಿದ್ದ ಓರ್ವ ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡಲು 15 ಸಾವಿರ ಬೇಡಿಕೆ ಇಟ್ಟಿದ್ದರು. ದೂರುದಾರನಿಂದ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…