Latest

ಖೋಟಾ ನೋಟು ದಂಧೆ ಬಯಲಿಗೆ:₹3.75 ಲಕ್ಷ ನಕಲಿ ನೋಟು ವಶ

ದಾವಣಗೆರೆ, ಜು.25 – ಖೋಟಾ ನೋಟು ಚಲಾವಣೆಯ ದೊಡ್ಡ ಜಾಲವೊಂದನ್ನು ದಾವಣಗೆರೆ ಜಿಲ್ಲೆ ಬಸವಾಪಟ್ಟಣ ಪೊಲೀಸರು ಪತ್ತೆಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಹೂವಿನಹಡಗಲಿ ತಾಲೂಕಿನ ನಡುವಿನ ತಾಂಡದ ಸಂತೋಷಕುಮಾರ (32), ಕೊಟ್ಟೂರು ತಾಲ್ಲೂಕಿನ ಬೇವೂರು ಗ್ರಾಮದ ವಿರೇಶ (37), ದಾವಣಗೆರೆ ತಾಲೂಕಿನ ಕುಕ್ಕವಾಡದ ಕುಬೇರಪ್ಪ (60) ಮತ್ತು ಅದೇ ಬೇವೂರಿನ ಹನುಮಂತಪ್ಪ (75) ಎನ್ನಲಾಗಿದೆ.

ಚಿರಡೋಣಿಯಲ್ಲಿ ಖಚಿತ ಮಾಹಿತಿ, ದಾಳಿಗೆ ಚಾಲನೆ

ಚಿರಡೋಣಿ ಗ್ರಾಮದ ದೊಡ್ಡಘಟ್ಟ ರಸ್ತೆಯ ಶಾಂತಿವನದ ಬಳಿಯಲ್ಲಿ ಖೋಟಾ ನೋಟು ಚಲಾವಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಹಿನ್ನೆಲೆಯಲ್ಲಿ, ಚನ್ನಗಿರಿ ಉಪವಿಭಾಗದ ಎಎಸ್‌ಪಿ ಮಾರ್ಗದರ್ಶನದಲ್ಲಿ ಹಾಗೂ ಸಂತೇಬೆನ್ನೂರು ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ನೇತೃತ್ವದಲ್ಲಿ, ಬಸವಾಪಟ್ಟಣ ಠಾಣೆ ಪಿಎಸ್‌ಐ ಇಮ್ತಿಯಾಜ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಸಂತೋಷಕುಮಾರ ಹಾಗೂ ರಾಮಪ್ಪ ಎಂಬ ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಅವರ ಬಳಿ ₹500 ಮುಖಬೆಲೆಯ ₹2 ಲಕ್ಷ ನಕಲಿ ನೋಟು ಪತ್ತೆಯಾಯಿತು. ಜೊತೆಗೆ ಬಳಸಿದ ಬೈಕ್‌ ಸಹ ವಶಪಡಿಸಿಕೊಳ್ಳಲಾಯಿತು.

ಹಳೆ ಆರೋಪಿ ಕಣ್ಗೂಡಿಸಿದ ಕುಬೇರಪ್ಪ ಸಿಕ್ಕಿಬಿದ್ದಿದ್ದು ಹೇಗೆ?

ಆರೋಪಿಗಳ ವಿಚಾರಣೆ ವೇಳೆ ಈ ದಂಧೆಗೆ ಹಿಂದೆಯೂ ಸೇರ್ಪಡೆ ಹೊಂದಿದ್ದ ಕುಬೇರಪ್ಪ ಎಂಬಾತ ಪ್ರಮುಖ ಪಾತ್ರ ವಹಿಸುತ್ತಿದ್ದಾನೆ ಎಂಬುದು ಬೆಳಕಿಗೆ ಬಂತು. ತಕ್ಷಣವೇ ಪೊಲೀಸರು ಆತನ ಅಡಗಿರುವ ಸ್ಥಳದ ಮೇಲೆ ದಾಳಿ ನಡೆಸಿದಾಗ, ಆತ ಹಾಗೂ ಅವನ ಸಹಚರ ಹನುಮಂತಪ್ಪನಿಂದ ₹500 ಮುಖಬೆಲೆಯ ₹28,000 ಹಾಗೂ ₹200 ಮುಖಬೆಲೆಯ ₹47,400 ನಕಲಿ ನೋಟು ಪತ್ತೆಯಾಯಿತು.

ಮತ್ತೆ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಆರೋಪಿಯ ಬಳಿ ₹500 ಮತ್ತು ₹200 ಮುಖಬೆಲೆಯ ₹1 ಲಕ್ಷ ನಕಲಿ ನೋಟು ಪತ್ತೆಯಾಗಿ, ಒಟ್ಟು ₹3,75,400 ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖೋಟಾ ನೋಟುಗಳ ದಂಧೆ ತೀವ್ರಗೊಂಡಿರುವ ಹಿನ್ನೆಲೆ, ಪೊಲೀಸರು ದಾವಣಗೆರೆಯಲ್ಲಿಯೂ ಇದೇ ಮಾದರಿಯ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಮೈಸೂರು, ತುಮಕೂರು ಸೇರಿ ಹಲವು ಕಡೆ ಖೋಟಾ ನೋಟು ಚಲಾಯಿಸಿದ್ದರ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸಿದ್ದು, ಈ ಸಂಬಂಧ ಇನ್ನಷ್ಟು ಮಾಹಿತಿಗಾಗಿ ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

45 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago