ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.
ರವಿ ನಿಂಗನಗೌಡ ಬಿರಾದಾರ ಹಾಗೂ ಇನ್ನಿತರರು ಸೇರಿಕೊಂಡು ನಕಲಿ ತುಪ್ಪು ಮಾರಾಟ ಮಾಡುತ್ತಿದ್ದರು. ಬೆಂಗಳೂರಿನಿಂದ ಖಾಸಗಿ ಬಸ್ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಕಲಿ ತುಪ್ಪ ಬಾಟಲ್, ಸ್ಟಿಕರ್ ಸೇರಿದಂತೆ ಪ್ಯಾಕಿಂಗ್ ಮಟೀರಿಯಲ್ ಹಾಗೂ ಬಿಲ್ ಬುಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ರವಿಯನ್ನು ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಸದ್ಯ ವಶಕ್ಕೆ ಪಡೆದ ನಕಲಿ ತುಪ್ಪವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ ಅಧಿಕಾರಿಗಳು, ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…