ಹುಬ್ಬಳ್ಳಿಯಲ್ಲಿ ಖೋಟಾ ನೋಟಿನ ಹಾವಳಿ ಮತ್ತೇ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯ ಹಳೆ ಬಸ್‌ನಿಲ್ದಾಣದ ಬಳಿ ಖೋಟಾನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಮೂವರನ್ನು ಉಪನಗರ ಠಾಣೆ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಶಿವಾನಂದ ಕಾರಜೋಳ, ವಿಜಯಪುರದ ಅಡವಿ ಶಂಕರಲಿಂಗನ ಗುಡಿ ನಿವಾಸಿ ಕಲ್ಲಯ್ಯ ಪಟ್ಟದಮಠ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೆಗ್ಗರಣಿಯ ಗುರುರಾಜ ಜಾಧವ ಬಂಧಿತರು ಎಂದು ತಿಳಿದುಬಂದಿದೆ.
ಆರೋಪಿಗಳು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿಯ ಸನ್ಮಾನ್ ಲಾಡ್ಜ್‌ನಲ್ಲಿ 200 ಮತ್ತು 100 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ದಂಧೆಯ ರೂವಾರಿಗಳನ್ನು ಬಂಧಿಸಿಸದ್ದು. ಬಂಧಿತ ಆರೋಪಿಗಳಿಂದ 73 ಖೋಟಾ ನೋಟುಗಳು, ಒಂದು ವಾಹನ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…