Categories: CrimeLatest

ಸ್ನಾನದ ವಿಡಿಯೋ ಚಿತ್ರಿಸಿ ವಿವಾಹಿತೆಗೆ ದೈಹಿಕ ಸಂಪರ್ಕಕ್ಕೆ ಬ್ಲ್ಯಾಕ್‌ಮೇಲ್: ಕಾಲೇಜು ವಿದ್ಯಾರ್ಥಿಯನ್ನು ಹತ್ಯೆಗೈದ ದಂಪತಿ

ಗಾಂಧಿನಗರ: ವಿವಾಹಿತ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಗುಪ್ತವಾಗಿ ಚಿತ್ರೀಕರಿಸಿ, ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದನೆಂಬ ಆರೋಪದ ಹಿನ್ನೆಲೆಯಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ದಂಪತಿ ಹತ್ಯೆ ಮಾಡಿರುವ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ತಾಲೂಕಿನಲ್ಲಿ ನಡೆದಿದೆ.

ಹತ್ಯೆಗೀಡಾದ ಯುವಕನನ್ನು ಹಾರ್ದಿಕ್ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಾರ್ದಿಕ್ ಆರೋಪಿಗಳ ಮನೆಯ ಸಮೀಪದಲ್ಲೇ ವಾಸಿಸುತ್ತಿದ್ದ. ಸುಮಾರು ಒಂದೂವರೆ ತಿಂಗಳಿನಿಂದ ಎರಡು ತಿಂಗಳ ಹಿಂದೆ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಆತ ಗುಪ್ತವಾಗಿ ಚಿತ್ರೀಕರಿಸಿದ್ದ ಎನ್ನಲಾಗಿದೆ. ಬಳಿಕ ವಿಡಿಯೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಸಾಮಾಜಿಕ ಅಪಮಾನಕ್ಕೆ ಹೆದರಿ ಮಹಿಳೆ ಆತನ ಬೆದರಿಕೆಗೆ ಮಣಿದಿದ್ದಳು ಎನ್ನಲಾಗಿದೆ. ಮಹಿಳೆಯ ಪತಿ ಫ್ಯಾನ್ ದುರಸ್ತಿ ಹಾಗೂ ವಿದ್ಯುತ್ ವೈರಿಂಗ್ ಕೆಲಸ ಮಾಡುತ್ತಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಘಟನೆ ಬಳಿಕವೂ ಹಾರ್ದಿಕ್ ನಿರಂತರವಾಗಿ ಮಹಿಳೆಗೆ ಬೆದರಿಕೆ ಹಾಕುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ನಡುವೆ ಮಹಿಳೆ ಹಾರ್ದಿಕ್ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದುದನ್ನು ಗಮನಿಸಿದ ಪತಿ, ಆಕೆಯೊಂದಿಗೆ ವಾಗ್ವಾದ ನಡೆಸಿದ್ದಾನೆ. ಈ ವೇಳೆ ಮಹಿಳೆ ತನ್ನ ಮೇಲೆ ನಡೆಯುತ್ತಿದ್ದ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಕುರಿತು ಪತಿಗೆ ಸಂಪೂರ್ಣ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಪತಿ, ಹಾರ್ದಿಕ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು, ಪತ್ನಿಯೂ ಅದಕ್ಕೆ ಸಹಕರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯೋಜನೆಯಂತೆ ಜುಲೈ 11ರ ಬೆಳಿಗ್ಗೆ ಮಹಿಳೆ ಹಾರ್ದಿಕ್‌ಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದಳು. ಪತಿ ಕೆಲಸಕ್ಕೆ ತೆರಳಿದಂತೆ ನಟಿಸಿ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದ.

ಬೆಳಿಗ್ಗೆ ಸುಮಾರು 9.10ರ ವೇಳೆಗೆ ಹಾರ್ದಿಕ್ ತನ್ನ ತಂದೆಗೆ ಕರೆ ಮಾಡಿ ಪರ್ಬತ್ಪುರ ಪ್ರದೇಶದಲ್ಲಿ ಜಮೀನು ನೋಡಲು ಹೋಗುತ್ತಿರುವುದಾಗಿ ತಿಳಿಸಿದ್ದ. ಆದರೆ, ಮಹಿಳೆಯ ಪತಿ ಮನೆಯಲ್ಲಿ ಇಲ್ಲವೆಂದು ಭಾವಿಸಿ ಆಕೆಯ ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಸಮಯದಲ್ಲಿ ದಂಪತಿಯ ಮೂವರು ಮಕ್ಕಳು ಶಾಲೆಗೆ ತೆರಳಿದ್ದರು. ಹಾರ್ದಿಕ್ ಮನೆಗೆ ಬಂದ ಬಳಿಕ ಪತಿ ಏಕಾಏಕಿ ಒಳಗೆ ಪ್ರವೇಶಿಸಿ ಆತನನ್ನು ಹಿಡಿದಿದ್ದಾನೆ. ಮಹಿಳೆ ಹಾರ್ದಿಕ್‌ನ ಕೈಗಳನ್ನು ಹಿಡಿದುಕೊಂಡಿದ್ದರೆ, ಪತಿ ತನ್ನ ಕುತ್ತಿಗೆಯಲ್ಲಿದ್ದ ಸ್ಕಾರ್ಫ್‌ನಿಂದ ಆತನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಫ್ಯಾನ್‌ನ ವಿದ್ಯುತ್ ಕೇಬಲ್‌ನಿಂದ ಮತ್ತೊಮ್ಮೆ ಕುತ್ತಿಗೆ ಬಿಗಿದು ಆತ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ದಂಪತಿ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ, ಮನೆಗೆ ಬೀಗ ಹಾಕಿ ಬೈಕ್‌ನಲ್ಲಿ ಹೊರಟಿದ್ದಾರೆ. ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಮಹಿಳೆಯ ತಂದೆಯ ಮನೆಗೆ ಬಿಟ್ಟು, ನಗರದಿಂದ ಪರಾರಿಯಾಗಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.

ಹಾರ್ದಿಕ್‌ನ ತಂದೆ ರಮೇಶ್‌ಜಿ ಠಾಕೋರ್ ನೀಡಿದ ದೂರಿನ ಆಧಾರದ ಮೇಲೆ ಕಲೋಲ್ ತಾಲೂಕು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದು ದೃಢಪಟ್ಟಿದೆ.

ತನಿಖೆಯ ವೇಳೆ ಹಾರ್ದಿಕ್ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಿಸಿ, ಅದನ್ನು ಆಧಾರವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂಬ ಆರೋಪದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದರೆ, ಆ ವಿಡಿಯೋವನ್ನು ಮಹಿಳೆ ಅಥವಾ ಆಕೆಯ ಪತಿ ಎಂದಿಗೂ ನೋಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಹಾರ್ದಿಕ್‌ನ ಮೊಬೈಲ್ ಫೋನ್ ಅನ್ನು ಮಹಿಳೆಯ ಪತಿ ಒಡೆದು ರಸ್ತೆ ಬದಿಗೆ ಎಸೆದಿದ್ದಾನೆ ಎನ್ನಲಾಗಿದೆ. ಮೊಬೈಲ್ ವಶಪಡಿಸಿಕೊಳ್ಳಲು ಆರೋಪಿಗಳ ಪೊಲೀಸ್ ಕಸ್ಟಡಿ ಕೋರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲೋಲ್ ತಾಲೂಕು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ದಂಪತಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago