ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಮತ್ತೊಂದು ಕೋರ್ಟ್ ತೀವ್ರ ಎದುರಾಗಿದೆ. ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ಅವರು 3 ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೊಂದು ಇಂದು ವಜಾ ಮಾಡಿ ಶಾಕ್ ನೀಡಿದೆ.
ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣಗಳಲ್ಲಿ ಸಾಕ್ಷಿಗಳ ವೀಕ್ಷಣೆಗೆ ನ್ಯಾಯಾಲಯ ಅನುಮತಿ ನೀಡಿದ್ದಾದರೂ, ಜಾಮೀನು ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ನ್ಯಾಯಾಲಯ, ಆರೋಪದ ಗಂಭೀರತೆಯ ಹಿನ್ನೆಲೆಯಲ್ಲಿ ಜಾಮೀನು ನೀಡಲು ನಿರಾಕರಿಸಿದೆ.
ಇದಕ್ಕೆ ಮೊದಲು, ತಮ್ಮ ವಿರುದ್ಧ ನಡೆಯುತ್ತಿರುವ ದೋಷಾರೋಪನ ಪ್ರಕ್ರಿಯೆ ಮುಂದೂಡಬೇಕೆಂದು ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಗಳ ತಿರಸ್ಕಾರ, ಪ್ರಜ್ವಲ್‌ಗೆ ಎರಡನೇ ಬಾರಿಗೆ ಕಾನೂನುಭದ್ರತೆಯ ಆಘಾತ ತರುವಂತಾಗಿದೆ.
ಇತ್ತ ಪ್ರಕರಣ ಸಂಬಂಧ ತನಿಖೆ ನಿರಂತರ ಮುಂದುವರಿದಿದ್ದು, ಸಾಕ್ಷ್ಯಾಧಾರ ಸಂಗ್ರಹ, ದಾಖಲೆ ಪರಿಶೀಲನೆ ಕೆಲಸ ತೀವ್ರಗೊಂಡಿದೆ. ಪ್ರಜ್ವಲ್ ವಿರುದ್ಧ ಹೂರಹೊಂದಿರುವ ಆರೋಪಗಳು ಗಂಭೀರವಾಗಿದ್ದು, ನ್ಯಾಯಾಲಯದ ನಿರ್ಧಾರಗಳು ತೀವ್ರ ಕಾನೂನು ಪ್ರಕ್ರಿಯೆಯತ್ತ ದಾರಿ ಹಾಕಿವೆ.
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…