ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ Rohini Sindhuri ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಮೈಸೂರು ಮೂಲದ ವಕೀಲ ಎನ್.ಆರ್. ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ M. Nagaprasanna ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಹತ್ವದ ಆದೇಶ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ನಿರಾಕರಿಸಿದ್ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

“ಈ ಆದೇಶದ ಪ್ರತಿಯನ್ನು ಸ್ವೀಕರಿಸಿದ ದಿನದಿಂದ ನಾಲ್ಕು ವಾರಗಳೊಳಗೆ ತನಿಖೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಪೀಠ ಸ್ಪಷ್ಟ ಸೂಚನೆ ನೀಡಿದೆ.

ಅರ್ಜಿದಾರರ ಪರ ವಕೀಲ ಬಿಪಿನ್ ಹೆಗಡೆ ವಾದ ಮಂಡಿಸಿದ್ದರು. ಈ ಪ್ರಕರಣ ಇದೀಗ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ತನಿಖೆ ಮೇಲೆ ಎಲ್ಲರ ಗಮನ ನೆಟ್ಟಿದೆ.

Related News

error: Content is protected !!