ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ Rohini Sindhuri ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಮೈಸೂರು ಮೂಲದ ವಕೀಲ ಎನ್.ಆರ್. ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ M. Nagaprasanna ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಹತ್ವದ ಆದೇಶ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ನಿರಾಕರಿಸಿದ್ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.
“ಈ ಆದೇಶದ ಪ್ರತಿಯನ್ನು ಸ್ವೀಕರಿಸಿದ ದಿನದಿಂದ ನಾಲ್ಕು ವಾರಗಳೊಳಗೆ ತನಿಖೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಪೀಠ ಸ್ಪಷ್ಟ ಸೂಚನೆ ನೀಡಿದೆ.
ಅರ್ಜಿದಾರರ ಪರ ವಕೀಲ ಬಿಪಿನ್ ಹೆಗಡೆ ವಾದ ಮಂಡಿಸಿದ್ದರು. ಈ ಪ್ರಕರಣ ಇದೀಗ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ತನಿಖೆ ಮೇಲೆ ಎಲ್ಲರ ಗಮನ ನೆಟ್ಟಿದೆ.
“ರಕ್ಷಕನೇ ಭಕ್ಷಕ” ಎನ್ನುವ ಮಾತಿಗೆ ಸಾಕ್ಷಿಯಂತ ಘಟನೆಯೊಂದು Akolaದಲ್ಲಿ ಬೆಳಕಿಗೆ ಬಂದಿದೆ. ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಒಬ್ಬರು ವಶದಲ್ಲಿದ್ದ…
ಮನೆಯ ವಿಶ್ವಾಸಕ್ಕೆ ಬಂದ ಸೊಸೆಯೇ ಅತ್ತೆಗೆ ವಿಷ ನೀಡಿ, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಪರಾರಿಯಾದ ಬೆಚ್ಚಿಬೀಳಿಸುವ ಘಟನೆ…
“ಪ್ರೀತಿ ಕುರುಡು” ಎನ್ನುವ ಮಾತು ಮತ್ತೆ ಸಾಬೀತಾಗುವಂತ ಘಟನೆ ಒಂದರಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮ ಕಥೆ ದುರ್ಘಟನೆಗೆ ತಲುಪಿದೆ.…
ಕೌಟುಂಬಿಕ ಅಥವಾ ವೈವಾಹಿಕ ಅತ್ಯಾಚಾರದ ವಿಚಾರ ಮತ್ತೆ ಚರ್ಚೆಗೆ ಬಂದಿರುವ ಈ ಸಂದರ್ಭದಲ್ಲಿ ಜನಪ್ರಿಯ ಗಾಯಕಿ Chinmayi Sripaada ತೀವ್ರವಾಗಿ…
ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಭಿಯಾನದಡಿ ದೇಶಾದ್ಯಂತ…
ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ದಿನಗೂಲಿ ನೌಕರರಿಗೆ ಕರ್ನಾಟಕ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇದುವರೆಗೆ ಗುತ್ತಿಗೆ, ಹೊರಗುತ್ತಿಗೆ…