Categories: CorruptionLatest

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಗೋಪಾಳಪುರ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಡಿಎಸ್‌ಎಸ್ ತಾಲೂಕು ಸಂಚಾಲಕರಾಗಿರುವ ಆನಂದ್ ಭಜಂತ್ರಿ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆದಿದ್ದು, ಅಟ್ರಾಸಿಟಿ ಪ್ರಕರಣದ ಪ್ರಗತಿ ಕುರಿತು ಮಾಹಿತಿ ಪಡೆಯಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಸಿಪಿಐ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಪ್ರಕರಣದಲ್ಲಿರುವ ಆರೋಪಿಗಳನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲು ಹಣ ನೀಡಬೇಕೆಂದು ಸಿಪಿಐ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರಂಭದಲ್ಲಿ ₹2 ಲಕ್ಷ ಲಂಚ ಕೇಳಲಾಗಿದ್ದು, ನಂತರ ಮಾತುಕತೆಯ ಬಳಿಕ ಮೊದಲ ಹಂತವಾಗಿ ₹1 ಲಕ್ಷ ನೀಡಲು ಒಪ್ಪಂದವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಾದ ಬಳಿಕ ದೂರುದಾರ ಆನಂದ್ ಭಜಂತ್ರಿ ಅವರು ಯಾದಗಿರಿ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೂರಿನ ಆಧಾರದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಜೆ.ಹೆಚ್. ಇನಾಮದಾರ ನೇತೃತ್ವದಲ್ಲಿ ಪಿಐ ಸಿದ್ದರಾಯ ಬೆಳ್ಳೂರಗಿ ಹಾಗೂ ಸಿಬ್ಬಂದಿ ಬಲೆ ಬೀಸಿದರು.

ಶುಕ್ರವಾರ ರಾತ್ರಿ ಸುಮಾರು 8.30ರ ವೇಳೆಗೆ ಗುರುಮಠಕಲ್‌ನಲ್ಲಿರುವ ಸಿಪಿಐ ಅವರ ಸರ್ಕಾರಿ ನಿವಾಸದಲ್ಲಿ ₹1 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಸಿಪಿಐ ವೀರಣ್ಣ ದೊಡ್ಡಮನಿಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಾಚರಣೆಯ ಬಳಿಕ ಅಧಿಕಾರಿಗಳು ಸ್ಥಳದಲ್ಲೇ ಮಹಜರ್ ಪ್ರಕ್ರಿಯೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕರ್ತವ್ಯ ನಿರ್ವಹಣೆಗೆ ಲಂಚ ಕೇಳಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕೆಂದು ಜನರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

22 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago