Categories: CorruptionLatest

₹4,200 ಕೋಟಿ ವೆಚ್ಚದ ಎಕ್ಸ್‌ಪ್ರೆಸ್‌ವೇಗೆ 12 ದಿನದಲ್ಲೇ ಬಿರುಕು: ಉತ್ತರ ಪ್ರದೇಶದಲ್ಲಿ ಕಳಪೆ ಕಾಮಗಾರಿ ಆರೋಪ

ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್‌ಫೀಲ್ಡ್ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೇವಲ 12 ದಿನಗಳಲ್ಲೇ ಬಿರುಕು ಬಿಟ್ಟಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಮಳೆಯಿಂದ ರಸ್ತೆ ಕುಸಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.

ಜುಲೈ 13ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಂಟಿಯಾಗಿ ಈ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದರು. ಅಭಿವೃದ್ಧಿಯ ಸಂಕೇತವಾಗಿ ಬಿಂಬಿಸಲಾಗಿದ್ದ ಈ ಯೋಜನೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹಾನಿಗೊಳಗಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಜುಲೈ 25ರಂದು ಸುರಿದ ಭಾರೀ ಮಳೆಯ ಪರಿಣಾಮ ಉನ್ನಾವೋ ಜಿಲ್ಲೆಯ ಕೊರಾರಿ ಗ್ರಾಮದ ಸಮೀಪ ಎಕ್ಸ್‌ಪ್ರೆಸ್‌ವೇಯ ಒಂದು ಭಾಗದಲ್ಲಿ ಆಳವಾದ ಬಿರುಕುಗಳು ಕಾಣಿಸಿಕೊಂಡು, ರಸ್ತೆಯ ಕೆಲ ಭಾಗ ಕುಸಿದಿದೆ. ರಸ್ತೆಯ ಮೇಲ್ಮೈ ಹಾನಿಗೊಳಗಾದ ದೃಶ್ಯಗಳನ್ನು ವಾಹನ ಸವಾರರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅವು ವ್ಯಾಪಕವಾಗಿ ವೈರಲ್ ಆಗಿವೆ.

ಈ ಘಟನೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೈಗೊಂಡ ಕಾಮಗಾರಿಯ ಗುಣಮಟ್ಟ ಹಾಗೂ ಯೋಜನೆಯ ಮೇಲ್ವಿಚಾರಣೆ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ. ಸಮಾಜವಾದಿ ಪಕ್ಷದ ನಾಯಕ ಮಧುಸೂದನ್ ಯಾದವ್ ಕುಸಿತದ ವಿಡಿಯೋವನ್ನು ಹಂಚಿಕೊಂಡು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಾನು ಲಖನೌ–ಕಾನ್ಪುರ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಮೂಲಕ ಪ್ರಯಾಣಿಸುತ್ತಿದ್ದಾಗ ಕೊರಾರಿ ಸಮೀಪ ಸುಮಾರು 5 ರಿಂದ 7 ಮೀಟರ್ ವ್ಯಾಪ್ತಿಯಲ್ಲಿ ರಸ್ತೆ ಕುಸಿದು ಬಿರುಕು ಬಿಟ್ಟಿರುವುದನ್ನು ಕಂಡೆ. ಇಂತಹ ಕಳಪೆ ಕಾಮಗಾರಿಯಿಂದ ಭೀಕರ ಅಪಘಾತಗಳು ಸಂಭವಿಸುವ ಅಪಾಯವಿದೆ,” ಎಂದು ಅವರು ಹೇಳಿದ್ದು, ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಆದರೆ, ಹೊಸದಾಗಿ ನಿರ್ಮಿಸಲಾದ ಎಕ್ಸ್‌ಪ್ರೆಸ್‌ವೇ ಇಷ್ಟು ಬೇಗ ಹಾನಿಗೊಳಗಾದ ಕುರಿತು ಎನ್‌ಎಚ್‌ಎಐ ಅಧಿಕಾರಿಗಳು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಈ ಘಟನೆ ಯೋಜನೆಯ ಗುಣಮಟ್ಟ, ಕಾಮಗಾರಿ ಮೇಲ್ವಿಚಾರಣೆ ಹಾಗೂ ಸಾರ್ವಜನಿಕ ಹಣದ ಸಮರ್ಪಕ ಬಳಕೆ ಕುರಿತಂತೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

5 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

5 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago