ಕೊಟ್ಟೂರು:- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದವರ ವಿರುದ್ಧ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ತಂಡದವರು ದಾಳಿ ಮಾಡಿ ಮಂಗಳವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ವಾಲ್ ಕಟ್ಟೆ ಹತ್ತಿರ ಹಾಗೂ ಪಿಎಲ್ ಡಿ ಬ್ಯಾಂಕ್ ಮುಂಭಾಗದಲ್ಲಿ ಎರಡು ಕಡೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿರುವರೆಂದು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ವರಿಷ್ಠಾಧಿಕಾರಿಗಳಾದ ಶ್ರೀ ಹರಿಬಾಬು ಹಾಗೂ ಡಿಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ ರವರ ಮಾರ್ಗದರ್ಶನದಲ್ಲಿ ಪಿಎಸ್ಐ ಗೀತಾಂಜಲಿ ಶಿಂಧೆ ಮತ್ತು ತಂಡದವರ ಜೊತೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವವರ ಮೇಲೆ ದಾಳಿ ಮಾಡಿ ಒಟ್ಟು 13 ಜನರ ವಶಕ್ಕೆ ಪಡೆದು ಅವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ 40 ಸಾವಿರ ಬೆಲೆ ಬಾಳುವ ಎರಡು ಸ್ಕ್ರೀನ್ ಟಚ್ ಮೊಬೈಲ್, 2200 ನಗದು ಹಣ, ಜಪ್ತಿ ಮಾಡಲಾಗಿದ್ದು ಈ ಬಗ್ಗೆ ಕೊಟ್ಟೂರು ಠಾಣೆಯಲ್ಲಿ ಗುನ್ನೆ ನಂಬರ್.54/2024 ಕಲಂ 78(1)(ಎ) (6) ಕೆ ಪಿ ಯಾಕ್ಟ್ ರೀತ್ಯ ಪ್ರಕರಣ ದಾಖಲಾಗಿದೆ.
ವರದಿ:- ಮಣಿಕಂಠ. ಬಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…