Categories: CrimeLatest

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು ನಂಬಿಸಿ ಜನರಿಂದ ಲಕ್ಷಾಂತರ ರೂಪಾಯಿ ಡೆಪಾಸಿಟ್ ಪಡೆದು ವಂಚನೆ ನಡೆಸುತ್ತಿದ್ದ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಿರಣ್ (28) ಮತ್ತು ಆರತಿ (23) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಚಿಕ್ಕಜಾಲ ನಿವಾಸಿಗಳಾಗಿದ್ದು, ಕಾಮಿಕಾದೇವಿ ಎಂಟರ್‌ಪ್ರೈಸಸ್ ಹೆಸರಿನಲ್ಲಿ ನಕಲಿ ಕಂಪನಿ ನಡೆಸಿ ವಂಚನೆ ನಡೆಸುತ್ತಿದ್ದರು ಎನ್ನಲಾಗಿದೆ.

ಆರೋಪಿಗಳು ಮನೆ ಆಧಾರಿತ ಉದ್ಯೋಗದ ಆಮಿಷವೊಡ್ಡಿ, ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳಿ, ಗ್ರಾಹಕರಿಂದ ಭದ್ರತಾ ಠೇವಣಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹಿಸುತ್ತಿದ್ದರು. ಹಣ ಪಡೆದ ಬಳಿಕ ಕೆಲಸ ನೀಡದೇ, ಸಂಪರ್ಕಕ್ಕೂ ಸಿಗದೆ ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಿಕ್ಕಜಾಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ಕೋಲಾರ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ತನಿಖೆ ನಡೆಸಿದ ದೇವನಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಮೂಲಕ ಮನೆ ಆಧಾರಿತ ಉದ್ಯೋಗದ ಹೆಸರಿನಲ್ಲಿ ನಡೆಯುತ್ತಿರುವ ಆನ್‌ಲೈನ್ ಹಾಗೂ ಆಫ್‌ಲೈನ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

19 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

19 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago