Latest

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸಿದ ಕಾರಣಕ್ಕೆ ದಲಿತ ವಿದ್ಯಾರ್ಥಿಯ ಕೈ ಕತ್ತರಿಸಿದ ದುಷ್ಕರ್ಮಿಗಳು!

ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಳಪಿಡವೂರು ಗ್ರಾಮದಲ್ಲಿ ಜಾತಿ ತಾರತಮ್ಯದ ಭಯಾನಕ ಮುಖ ಮತ್ತೊಮ್ಮೆ ಬಯಲಾಯಿತು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಆರ್. ಐಯ್ಯಸಾಮಿ ರಾಯಲ್ ಎನ್‌ಫೀಲ್ಡ್ ಬೈಕ್ ಸವಾರಿ ಮಾಡಿದ್ದಕ್ಕೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮೂವರು ದುಷ್ಕರ್ಮಿಗಳು ಆತನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯು ಬುಧವಾರ ಸಂಜೆ ಸಂಭವಿಸಿದ್ದು, ರೈಡ್ ಮಾಡುತ್ತಿದ್ದ ಐಯ್ಯಸಾಮಿಯನ್ನು ಆರ್. ವಿನೋತ್ ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಎಂಬವರು ತಡೆದು ಜಾತಿ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಬಳಿಕ ಹಲ್ಲೆಗಿಳಿದ ಈ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಆತನ ಮೇಲೆ ಅಮಾನುಷ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆಯಿಂದ ಐಯ್ಯಸಾಮಿಯ ಎರಡೂ ಕೈಗಳಿಗೆ ಭಾರಿ ಗಾಯಗಳಾಗಿದ್ದು, ತಕ್ಷಣವೇ ಮಧುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕುಟುಂಬದ ಆಕ್ರೋಶ

ಈ ಅಮಾನುಷ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಐಯ್ಯಸಾಮಿಯ ಸಂಬಂಧಿ ಮುನಿಯಸಾಮಿ, “ಗ್ರಾಮದಲ್ಲಿ ದಲಿತರುತ ಬುಲೆಟ್ ಬೈಕ್ ಓಡಿಸಬಾರದು ಎಂಬ ಮನೋಭಾವ ಈಗಲೂ ಜೀವಂತವಿದೆ. ಈ ಹಿಂದೆಯೂ ಈ ಯುವಕರು ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದನ್ನು ನಾವು ಕಂಡಿದ್ದೇವೆ. ಐಯ್ಯಸಾಮಿ ತಕ್ಷಣ ಓಡಿಹೋಗಿ ಬಚಾವಾಗದಿದ್ದರೆ ಅವರೇನು ಮಾಡುತ್ತಿದ್ದರೋ ತಿಳಿಯದು. ಹಲ್ಲೆಯ ಬಳಿಕವೂ ಈ ದುಷ್ಕರ್ಮಿಗಳು ನಮ್ಮ ಮನೆಯತ್ತ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಬೇಕು,” ಎಂದು ಆಗ್ರಹಿಸಿದ್ದಾರೆ.

ಐಯ್ಯಸಾಮಿಯ ತಂದೆ ಭೂಮಿನಾಥನ್ ಮಾತು

ಈ ಬಗ್ಗೆ ಮಾತನಾಡಿದ ಭೂಮಿನಾಥನ್, “ಈಗಾಗಲೇ ಈ ಯುವಕರು ಐಯ್ಯಸಾಮಿಯ ಬೈಕ್‌ ನಷ್ಟಪಡಿಸಲು ಯತ್ನಿಸಿದ್ದರು. ನನ್ನ ಮಗ ಬುಲೆಟ್ ಬೈಕ್ ಓಡಿಸುವುದು ಅವರಿಗೆ ಸಹಿಸಲಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ಅವರು ಹೊಂದಿರಲಿಲ್ಲ, ಆದ್ದರಿಂದ ಹಲ್ಲೆಗೆ ಮುಂದಾದರು,” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮ

ಈ ಪ್ರಕರಣದಲ್ಲಿ ಈಗಾಗಲೇ ಆರ್. ವಿನೋತ್ ಕುಮಾರ್, ಎ. ಅಥೀಶ್ವರನ್ ಮತ್ತು ಎಂ. ವಲ್ಲರಸು ಬಂಧಿತರಾಗಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 296 (1), 126 (2), 118 (1), 351 (3) ಮತ್ತು ಎಸ್ಸಿ-ಎಸ್ಟಿ (ಅತ್ಯಾಚಾರ ತಡೆ) ಕಾಯ್ದೆಯ 3(1)(r)(s) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಯು ತಮಿಳುನಾಡಿನಲ್ಲಿ ಇನ್ನೂ ಜಾತಿ ವೈಷಮ್ಯ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ಸಂತ್ರಸ್ತನಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ವೃದ್ಧಿಯಾಗುತ್ತಿದೆ.

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

17 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago