ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ 25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಸೋಮವಾರ ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.
ದಕ್ಷಿಣ ದೆಹಲಿಯ ಬದರ್ಪುರದಲ್ಲಿ ನೆಲೆಸಿದ್ದ ಆಯುಷಿಯನ್ನು ಆಕೆಯ ತಂದೆ ನಿತೇಶ್ ಯಾದವ್ ಹತ್ಯೆಗೈದಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆಕೆ ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದರಿಂದ ಹಾಗೂ ಆಕೆ ಆಗಾಗ್ಗೆ ತಡರಾತ್ರಿವರೆಗೂ ಹೊರಗೆ ಇರುತ್ತಿದ್ದರಿಂದ ಕೋಪಗೊಂಡು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಮಥುರಾ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ. ನವೆಂಬರ್ 17 ರಂದು ಆಯುಷಿಯನ್ನು ತನ್ನ ಪರವಾನಗಿ ಪಡೆದ ಗನ್ನಿಂದ ಶೂಟ್ ಮಾಡಿದ ನಂತರ ಯಾದವ್ , ಶವವನ್ನು 12 ಗಂಟೆಗಳ ಕಾಲ ಮನೆಯಲ್ಲಿಯೇ ಇಟ್ಟುಕೊಂಡಿದ್ದ ಎಂದು ಆರೋಪಿಸಲಾಗಿದೆ. ಅವನು ಮತ್ತು ಆತನ ಹೆಂಡತಿ ತಡರಾತ್ರಿಯವರೆಗೂ ಕಾದು ನಂತರ ಶವವನ್ನು ಸೂಟ್ಕೇಸ್ನಲ್ಲಿ ಪ್ಯಾಕ್ ಮಾಡಿ ಮಥುರಾದಲ್ಲಿ ಎಸೆದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ವೇ ಬಳಿ ದೊಡ್ಡ ಕೆಂಪು ಸೂಟ್ಕೇಸ್ನಲ್ಲಿ ಪ್ಲಾಸ್ಟಿಕ್ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಸೂಟ್ಕೇಸ್ ಗಮನಿಸಿದ ಕಾರ್ಮಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆಯುಷಿಯನ್ನು ಆಕೆಯ ತಂದೆ ನಿತೇಶ್ ಯಾದವ್ ಕೊಂದಿರುವುದು ಆಕೆಯ ತಾಯಿ ಮತ್ತು ಸಹೋದರನಿಗೆ ತಿಳಿದಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಸೂಟ್ಕೇಸ್ ವಶಪಡಿಸಿಕೊಂಡ ನಂತರ, ಪೊಲೀಸರು ಫೋನ್ ಪತ್ತೆಹಚ್ಚುವ ಮೂಲಕ ತನಿಖೆಯನ್ನು ಪ್ರಾರಂಭಿಸಿದರು, ಸಿಸಿಟಿವಿ ದೃಶ್ಯಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಪರಿಶೀಲಿಸಿದರು ಎಂದು ಅವರು ಹೇಳಿದ್ದಾರೆ.
ಆರಂಭದಲ್ಲಿ, ಆಕೆಯ ಗುರುತಿನ ಬಗ್ಗೆ ಸುಳಿವು ಇಲ್ಲದ ಯುಪಿ ಪೊಲೀಸರು ಸುಳಿವುಗಳಿಗಾಗಿ ಐದು ತಂಡಗಳನ್ನು ರಚಿಸಿದ್ದರು. ಆಕೆಯ ತಾಯಿ ಮತ್ತು ಸಹೋದರ ಅವಳನ್ನು ಗುರುತಿಸಲು ಮುಂದೆ ಬಂದಾಗ ಇದು ಬೆಳಕಿಗೆ ಬಂದಿತ್ತು. ಕರೆ ಮಾಡಿದ ಅಪರಿಚಿತರೊಬ್ಬರು ಭಾನುವಾರ ಬೆಳಿಗ್ಗೆ ಆಕೆಯ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಥುರಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿರುವ ಕೃಷಿ ಸಂಶೋಧನಾ ಸಂಸ್ಥೆಯ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ತಲೆಗೆ ಗಾಯ ಮತ್ತು ಭುಜದ ಮೇಲೆ ಗಾಯವಾಗಿತ್ತು.
ಪೊಲೀಸರು ವಿಚಾರಣೆ ನಡೆಸಿದ ನಂತರ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ. ದೆಹಲಿಯಲ್ಲಿಯೇ ನೆಲೆಸಿದ ನಿತೇಶ್ ಯಾದವ್ ಪ್ರಸ್ತುತ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಮಾರಾಟ ಮಾಡುವ ಅಂಗಡಿಯನ್ನು ನಡೆಸುತ್ತಿದ್ದಾರೆ. ಮೃತಪಟ್ಟ ಆಯುಷಿ ಬಿಸಿಎ (ಬ್ಯಾಚುಲರ್ ಇನ್ ಕಂಪ್ಯೂಟರ್ ಅಪ್ಲಿಕೇಷನ್) ಕೋರ್ಸ್ ಓದುತ್ತಿದ್ದರು. ಆಯುಷಿ ತನ್ನ ಮನೆಯವರಿಗೆ ತಿಳಿಯದಂತೆ ಬೇರೆ ಜಾತಿಯ ಛತ್ರಪಾಲ್ ಚೌಧರಿ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…