Latest

ತುಮಕೂರಿನಲ್ಲಿ ಲಾಡ್ಜ್ ರೂಂನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ದಾವಣಗೆರೆ PSI

ತುಮಕೂರು, ಜುಲೈ 6: ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (PSI) ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 58 ವರ್ಷದ ನಾಗರಾಜು ಅವರು, ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಜುಲೈ 1ರಂದು ಲಾಡ್ಜ್‌ನ ನಾಲ್ಕನೇ ಮಹಡಿಯಲ್ಲಿರುವ ರೂಂ ಒಂದನ್ನು ಬಾಡಿಗೆಗೆ ತೆಗೆದುಕೊಂಡಿದ್ದ ನಾಗರಾಜು, ಅದೇ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕು ದಿನಗಳ ನಂತರ ಲಾಡ್ಜ್‌ ಸಿಬ್ಬಂದಿಗೆ ಕೋಣೆಯಿಂದ ದುರ್ವಾಸನೆ ಹರಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ತುಮಕೂರು ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ಸಂಬಂಧ ತನಿಖೆ ಪ್ರಾರಂಭಿಸಿದ್ದಾರೆ. ಮೂಲಗಳ ಪ್ರಕಾರ, ಮೃತ ನಾಗರಾಜು ಸಾವಿಗೆ ಮೊದಲು ಸುಮಾರು ಮೂರು ಪುಟಗಳ ಡೆತ್ ನೋಟು ಬರೆದಿದ್ದು, “ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ” ಎಂದು ಬರೆದಿರುವುದಾಗಿ ತಿಳಿದು ಬಂದಿದೆ. ಆದರೆ ಡೆತ್ ನೋಟಿನ ಸಂಪೂರ್ಣ ವಿವರ ಇನ್ನೂ ಬಹಿರಂಗವಾಗಿಲ್ಲ.

ಆರೋಗ್ಯ ಸಮಸ್ಯೆ, ಮಾನಸಿಕ ಒತ್ತಡ?

ಮೃತರು ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದು, ಸದ್ಯ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತೂ ಒಂದೂವರೆ ವರ್ಷದಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ನಾಗರಾಜು, ನಿವೃತ್ತಿ ಜೀವನವನ್ನು ಕುಟುಂಬದೊಂದಿಗೆ ಕಳೆದಿರಬಹುದಾಗಿತ್ತು. ಆದರೆ ಆ ನಿರೀಕ್ಷೆಗೆ ಇದೊಂದು ಭೀಕರ ಅಂತ್ಯವಾಗಿದೆ.

ಮೃತರ ಪತ್ನಿ ಲಲಿತಮ್ಮ ಮಾತುಗಳು ಹೃದಯವಿದ್ರಾವಕವಾಗಿದ್ದು, “ ಜುಲೈ 1ರಂದು ಮನೆಯಿಂದ ಹೊರಡಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಾಪತ್ತೆ ಪ್ರಕರಣವನ್ನು ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ದಾಖಲಿಸಿದ್ದೆವು. ಈಗ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದೇವೆ,” ಎಂದು ತಿಳಿಸಿದ್ದಾರೆ.

ಅಲ್ಲದೆ, “ಅವರಿಗೆ ಶುಗರ್, ಬಿಪಿ, ಹೃದಯ ಸಂಬಂಧಿ ಕಾಯಿಲೆ ಇದ್ದವು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರುಗಳೂ ಕಂಡುಬಂದಿದ್ದವು. ಕಳೆದ ವರ್ಷ ಮಗಳ ಮದುವೆ ಮಾಡಿದ್ದೆವು, ಮುಂದಿನ ತಿಂಗಳು ಮಗಳ ಹೆರಿಗೆ ಇದೆ. ಇಂತಹ ಸಂದರ್ಭದಲ್ಲಿ ಇಂಥ ತೀರ್ಮಾನಕ್ಕೆ ಏಕೆ ಬಂದರು ಎಂಬುದು ಅರ್ಥವಾಗುತ್ತಿಲ್ಲ” ಎಂದು ಕಣ್ಣೀರಲ್ಲಿ ಹೇಳಿದರು.

ಪೊಲೀಸರ ತನಿಖೆ ಮುಂದುವರಿಕೆ

ಪಿಎಸ್‌ಐ ನಾಗರಾಜು ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಡೆತ್ ನೋಟಿನ ವಿಷಯ, ಆರೋಗ್ಯ ಸ್ಥಿತಿ, ವ್ಯಕ್ತಿಗತ ಒತ್ತಡಗಳು ಸೇರಿದಂತೆ ಎಲ್ಲ ಮೂಲಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಘಟನೆ ಪೊಲೀಸ್ ಇಲಾಖೆ ಹಾಗೂ ನಾಗರಾಜು ಅವರ ಕುಟುಂಬದಲ್ಲಿ ಆಘಾತವನ್ನುಂಟು ಮಾಡಿದ್ದು, ಹಿರಿಯ ಅಧಿಕಾರಿಗಳು ಮರಣೋತ್ತರ ವರದಿ ಹಾಗೂ ಡೆತ್ ನೋಟಿನ ವಿವರದೊಂದಿಗೆ ಮುನ್ನಡೆ ನಡೆಸುತ್ತಿದ್ದಾರೆ.

nazeer ahamad

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

5 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

10 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago