Categories: CorruptionLatest

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ ಅಧಿಕಾರಿಗೆ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪಶ್ಚಿಮ ವಲಯದ DCRE ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್, ಕೇಂದ್ರ ಕಚೇರಿಯ ಎಸ್‌ಪಿ ಕರಿಬಸನಗೌಡ ಮತ್ತು ಡಿವೈಎಸ್‌ಪಿ ಮಹೇಶ್ವರಗೌಡ ವಿರುದ್ಧ ನೇರವಾಗಿ ಡಿಸಿಆರ್‌ಇ ಡಿಜಿ ಉಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಶ್ರೀನಿವಾಸ್ ಆರೋಪದ ಪ್ರಕಾರ, ಮೇಲ್ಜಾತಿ ಆರೋಪಿಗಳ ಪರ ಅಂತಿಮ ವರದಿ ಸಲ್ಲಿಸುವಂತೆ ಒತ್ತಡ ಹೇರಲಾಗುತ್ತಿತ್ತು. ಕೆಲ ಪ್ರಕರಣಗಳಲ್ಲಿ ಎಸ್‌ಪಿ ನಿರ್ದೇಶನದಂತೆ ಡಿವೈಎಸ್‌ಪಿ ಮೂಲಕ ಒತ್ತಡ ತರುವ ಪ್ರಯತ್ನ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರದಲ್ಲಿ ತಾವು ವಿರೋಧ ವ್ಯಕ್ತಪಡಿಸಿದ ನಂತರದಿಂದಲೇ ಕಿರುಕುಳ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಇದಲ್ಲದೆ, ತಮ್ಮ ವಿರುದ್ಧ ಸುಳ್ಳು ಪಿಟಿಷನ್‌ಗಳನ್ನು ಪಡೆದು ತನಿಖೆ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಈ ಕುರಿತು ವೀಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಕಳೆದ ತಿಂಗಳು ತಮಗೆ ನೀಡಿದ ವರ್ಗಾವಣೆಗೆ ವಿರುದ್ಧವಾಗಿ KATನಲ್ಲಿ ಸ್ಟೇ ಪಡೆದಿದ್ದರೂ, ನಕಲಿ ದಾಖಲೆ ಸೃಷ್ಟಿಸಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ರೀತಿಯ ಕಿರುಕುಳ ಮುಂದುವರಿದರೆ ಆತ್ಮಹತ್ಯೆ ಮಾಡುವ ಎಚ್ಚರಿಕೆಯನ್ನು ಕೂಡ ಅವರು ವ್ಯಕ್ತಪಡಿಸಿದ್ದಾರೆ.

ಇತ್ತ, ತಮ್ಮ ವಿರುದ್ಧ ಬಂದಿರುವ ಎಲ್ಲಾ ಆರೋಪಗಳನ್ನು ಎಸ್‌ಪಿ ಕರಿಬಸನಗೌಡ ತಳ್ಳಿಹಾಕಿದ್ದಾರೆ. ಶ್ರೀನಿವಾಸ್ ಆರೋಪಗಳಿಗೆ ಯಾವುದೇ ಆಧಾರವಿಲ್ಲ, ಅವು ಕಪೋಲಕಲ್ಪಿತ ಎಂದು ತಿಳಿಸಿದ್ದಾರೆ. ತಮ್ಮ ಹಾಗೂ ಡಿವೈಎಸ್‌ಪಿ ಮಹೇಶ್ವರಗೌಡರ ನಡುವೆ ಹೆಚ್ಚಿನ ಸಂಪರ್ಕವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಕೇಂದ್ರ ಕಚೇರಿಯ ಪಾತ್ರವಿಲ್ಲ ಎಂದೂ ಹೇಳಿದ್ದಾರೆ.

ಈ ಪ್ರಕರಣ ಇದೀಗ ಪೊಲೀಸ್ ಇಲಾಖೆಯೊಳಗಿನ ವಿವಾದಕ್ಕೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

56 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago