Categories: CrimeLatest

ಸ್ನೇಹಿತರ ಜೊತೆ ಬೆಟ್ಟಕ್ಕೆ ಹೋದ 19 ವರ್ಷದ ಯುವತಿ ಸಾವು: ಅಪಘಾತವೇ? ಬರ್ತ್‌ಡೇ ನೆಪದಲ್ಲಿ ಪ್ಲಾನ್ ಮಾಡಿದ ಕೊಲೆಯೇ?

ಮಂಡ್ಯ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಆರಂಭದಲ್ಲಿ ಸಾಮಾನ್ಯ ರಸ್ತೆ ಅಪಘಾತವೆಂದು ಕಂಡಿದ್ದ ಘಟನೆ ಇದೀಗ ಕೊಲೆ ಆರೋಪದ ದಿಕ್ಕಿನಲ್ಲಿ ತನಿಖೆ ಸಾಗುವಂತಾಗಿದೆ.

ಮಂಡ್ಯ ತಾಲೂಕಿನ ಹೊನ್ನೆಮಡು ಗ್ರಾಮದ ನಿವಾಸಿ ನವೀನಾ (19) ಆಗಸ್ಟ್ 2ರಂದು ತನ್ನ ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಅವರೊಂದಿಗೆ ಕೊಮ್ಮೇರಹಳ್ಳಿ ಬೆಟ್ಟಕ್ಕೆ ತೆರಳಿದ್ದಳು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವೀನಾ ಮೃತಪಟ್ಟಿದ್ದಾಳೆ ಎಂದು ಮೊದಲಿಗೆ ತಿಳಿದುಬಂದಿತ್ತು.

ಮಂಡ್ಯ ನಗರದಲ್ಲಿರುವ ಪಿಜಿಯಲ್ಲಿ ವಾಸವಿದ್ದು, ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನಾ, “ಮನೆಗೆ ಹೋಗುತ್ತಿದ್ದೇನೆ” ಎಂದು ಪಿಜಿ ಮಾಲೀಕರಿಗೆ ತಿಳಿಸಿ ಹೊರಟಿದ್ದಳು. ಆದರೆ ಮನೆಗೆ ತೆರಳುವ ಬದಲು ಸ್ನೇಹಿತರೊಂದಿಗೆ ಬೆಟ್ಟದ ಕಡೆಗೆ ಹೋಗಿದ್ದಳು.

ಘಟನೆಗೆ ಇದೀಗ ಮಹತ್ವದ ತಿರುವು ಸಿಕ್ಕಿದ್ದು, ನವೀನಾ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬರ್ತ್‌ಡೇ ಆಚರಣೆಯ ನೆಪದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಅದಕ್ಕೆ ನವೀನಾ ಪ್ರತಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಬಳಿಕ ಪ್ರಕರಣವನ್ನು ಅಪಘಾತವೆಂದು ಬಿಂಬಿಸಲು ಮೃತದೇಹವನ್ನು ಕಾರಿನ ಮುಂಭಾಗದ ಸೀಟಿನಲ್ಲಿ ಕೂರಿಸಿ ಉದ್ದೇಶಪೂರ್ವಕವಾಗಿ ಕಾರನ್ನು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆಸಲಾಗಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

ಈ ಅನುಮಾನಗಳಿಗೆ ಮತ್ತಷ್ಟು ಬಲ ನೀಡುವಂತೆ, ಕಾರಿನಲ್ಲಿದ್ದ ನವೀನಾ ಸಾವನ್ನಪ್ಪಿದ್ದರೆ, ಜೊತೆಯಲ್ಲಿದ್ದ ಮೂವರು ಸ್ನೇಹಿತರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲದೆ, ಸಂಜೆ ಸಂಭವಿಸಿದ ಘಟನೆಯ ಕುರಿತು ರಾತ್ರಿ 11 ಗಂಟೆಯವರೆಗೂ ಕುಟುಂಬಕ್ಕೆ ಮಾಹಿತಿ ನೀಡದಿರುವುದೂ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನವೀನಾ ತಾಯಿ ಬೊಮ್ಮಮ್ಮ ನೀಡಿದ ದೂರಿನ ಆಧಾರದ ಮೇಲೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಈ ಪ್ರಕರಣದಲ್ಲಿ ನಿಜಕ್ಕೂ ಉದ್ದೇಶಪೂರ್ವಕ ಕೊಲೆ ನಡೆದಿದೆಯೇ ಅಥವಾ ಇದು ಕೇವಲ ದುರದೃಷ್ಟಕರ ಅಪಘಾತವೇ ಎಂಬುದು ಪೊಲೀಸ್ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

ಸೂಚನೆ: ಈ ಪ್ರಕರಣದಲ್ಲಿ ಆರೋಪಗಳು ಕುಟುಂಬದ ದೂರಿನ ಆಧಾರಿತವಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಅವು ಸಾಬೀತಾಗಿಲ್ಲ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

5 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

5 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago