Categories: CrimeLatest

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕೃತಿ ಬಂಗೇರಾ ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದ್ದು, ಕಡಿಯಾಳಿ ಪ್ರದೇಶದ ಖಾಸಗಿ ಹೋಟೆಲ್‌ವೊಂದರಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಐದು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಕಲ್ಮಾಡಿಯಲ್ಲಿರುವ ನಿವಾಸದಲ್ಲಿ ತಾಯಿ ಹಾಗೂ ಸಹೋದರಿಯೊಂದಿಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲೇ ದುರ್ಘಟನೆ

ಆಗಸ್ಟ್ 6ರಂದು ಮಧ್ಯಾಹ್ನ ಕೃತಿ ಮನೆಯಲ್ಲಿದ್ದ ವೇಳೆ ತಾಯಿಯನ್ನು ಯಾವುದೋ ಕೆಲಸಕ್ಕಾಗಿ ಹೊರಗೆ ಕಳುಹಿಸಿದ್ದರು ಎನ್ನಲಾಗಿದೆ. ಕೆಲ ಸಮಯದ ಬಳಿಕ ತಾಯಿ ಮನೆಗೆ ಮರಳಿದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

ಹಲವು ಬಾರಿ ಬಾಗಿಲು ತೆರೆಯಲು ಪ್ರಯತ್ನಿಸಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ತಾಯಿ ರತ್ನಾ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿದ ಬಳಿಕ ಮನೆಯೊಳಗೆ ಪರಿಶೀಲಿಸಿದಾಗ ಕೃತಿ ಮೃತಪಟ್ಟಿರುವುದು ಪತ್ತೆಯಾಗಿದೆ.

ಮಾಹಿತಿ ತಿಳಿದು ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿ, ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

ಮಾನಸಿಕ ಒತ್ತಡದಲ್ಲಿದ್ದರೇ?

ಕೃತಿ ಅವರ ಸಾವಿಗೆ ನಿಖರ ಕಾರಣ ಈವರೆಗೆ ತಿಳಿದುಬಂದಿಲ್ಲ. ಇತ್ತೀಚಿನ ದಿನಗಳಲ್ಲಿ ಅವರು ಮಾನಸಿಕವಾಗಿ ಒತ್ತಡದಲ್ಲಿದ್ದರು ಎಂಬ ಮಾಹಿತಿ ಕುಟುಂಬದ ಮೂಲಗಳಿಂದ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಅವರ ವೈಯಕ್ತಿಕ ಜೀವನ, ಉದ್ಯೋಗ ಹಾಗೂ ಇತ್ತೀಚಿನ ಪರಿಸ್ಥಿತಿಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕುಟುಂಬ ಸದಸ್ಯರು ಹಾಗೂ ಆಪ್ತರಿಂದಲೂ ವಿಚಾರಣೆ ನಡೆಸಲಾಗುತ್ತಿದೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಕೃತಿ ಅವರ ಸಾವಿನ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ತನಿಖೆಯ ಬಳಿಕವಷ್ಟೇ ಘಟನೆಯ ಸಂಪೂರ್ಣ ಹಿನ್ನೆಲೆ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago