ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಸಾಲದ ಒತ್ತಡದಿಂದ ಒಂದೇ ಕುಟುಂಬದಲ್ಲಿ ನಡೆದ ಭೀಕರ ಘಟನೆ ಇಬ್ಬರ ಜೀವ ತೆಗೆದುಕೊಂಡಿದೆ. ತಾಯಿ ಹಾಗೂ ಅಕ್ಕನನ್ನು ಕೊಂದು, ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋಹನ್ ಗೌಡ (27) ಮತ್ತು ವರ್ಷಿತಾ ಮಗ ಮಯಾಂಕ್ (11) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ವಿವರ:
ಸಾಲಗಾರರ ಕಾಟದಿಂದ ಮನೋವ್ಯಥೆಗೆ ಒಳಗಾಗಿದ್ದ ಮೋಹನ್ ಗೌಡ, ಆತ್ಮಹತ್ಯೆ ಮಾಡುವುದಾಗಿ ಮುನ್ನವೇ ವಿಡಿಯೋ ದಾಖಲಿಸಿ ಸಂಬಂಧಿಕರಿಗೆ ಕಳುಹಿಸಿದ್ದನು. ಇದರಿಂದ ಆತಂಕಗೊಂಡ ಸಂಬಂಧಿಕರು ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡುಬಂದಿದೆ. ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ತಾಯಿ ಮತ್ತು ಅಕ್ಕ ಮೃತದೇಹಗಳು ಪತ್ತೆಯಾಗಿವೆ.
ಅಲ್ಲದೆ, ಮೋಹನ್ ಮತ್ತು ಮಯಾಂಕ್ ಗಾಯಗೊಂಡ ಸ್ಥಿತಿಯಲ್ಲಿ ನೆಲದಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಇಬ್ಬರೂ ಜೀವಪಾಯದ ನಡುವೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾಥಮಿಕ ತನಿಖೆ:
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೋಹನ್ ಚೀಟಿ ವ್ಯವಹಾರದಲ್ಲಿ ಹಾಗೂ ಐಷಾರಾಮಿ ಜೀವನಕ್ಕಾಗಿ ಹೆಚ್ಚಿನ ಸಾಲ ಮಾಡಿಕೊಂಡಿದ್ದನು. ಸಾಲ ತೀರಿಸಲು ಆಗದೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.
ಮೋಹನ್ ಮೊದಲು ತಾಯಿ, ಅಕ್ಕ ಮತ್ತು ಬಾಲಕನ ಕತ್ತು ಸೀಳಿ, ನಂತರ ತಾನು ಆತ್ಮಹತ್ಯೆಗೆ ಯತ್ನಿಸಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…