Latest

ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಕನ್ನಡ ಧ್ವಜ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ.

ಹುಬ್ಬಳ್ಳಿ, ಜೂನ್ 29: ಐತಿಹಾಸಿಕ ಹಿನ್ನೆಲೆ ಹೊಂದಿದ ಉತ್ತರ ಕರ್ನಾಟಕದ ಹೆಮ್ಮೆಯ ನಗರ ಹುಬ್ಬಳ್ಳಿ, ವಾಣಿಜ್ಯ ಕೇಂದ್ರವೆಂದು, “ಛೋಟಾ ಮುಂಬೈ”ಯೆಂದು ಖ್ಯಾತಿ ಪಡೆದಿರುವ ಈ ನಗರ ಈಗ ಕನ್ನಡಪರ ಅಭಿಮಾನಿಗಳ ಮನಸ್ಸಿಗೆ ನೋವುಂಟುಮಾಡುವ ಘಟನೆಗೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಹಾರುತ್ತಿದ್ದ ಕನ್ನಡ ಬಾವುಟ ಕೊಳೆಯಾಗಿ ಬಣ್ಣಮಾಸಿ ಅವ್ಯವಸ್ಥೆಯ ಸ್ಥಿತಿಗೆ ತಲುಪಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ನಗರದ ಪೈಕಿ ಹೆಚ್ಚು ಜನ ಓಡಾಡುವ ಪ್ರದೇಶವಲ್ಲದೆ, ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಈ ಮಾರ್ಗದ ಮೂಲಕ ಪ್ರತಿದಿನ ನೂರಾರು ಜನರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಆದರೆ ಬಾವುಟದ ತೊಂದರೆ ಯಾರಿಗೂ ಕಾಣಿಸಿಕೊಂಡಿಲ್ಲವೆಂಬಂತೆ ನಿರ್ಲಕ್ಷ್ಯ ಮುಂದುವರಿದಿದೆ. ಬಾವುಟದ ಬಣ್ಣ ಮಾಸಿ, ಹರಿದು, ಕೊಳೆಯಾಗಿ ಬಿಟ್ಟಿದ್ದರೂ ಅದು ಅಲ್ಲಿಯಷ್ಟೆ ನಿಲ್ಲಿಸಿಕೊಂಡಿದ್ದು, ಇದುವರೆಗೆ ಹೊಸ ಬಾವುಟ ಹಾರಿಸುವ ಕಾರ್ಯ ಆರಂಭವಾಗಿಲ್ಲ.

ಸ್ಥಳೀಯ ಕನ್ನಡಪರ ಸಂಘಟನೆಗಳು, ನಾಗರಿಕರು, ಆಕ್ರೋಶ ವ್ಯಕ್ತವಾಗುತ್ತಿದ್ದು, “ಇದು ಕನ್ನಡದ ಹೆಮ್ಮೆ ಹಾಗೂ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆಯಾಗುವಂತದ್ದು” ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

“ಹುಬ್ಬಳ್ಳಿಯಂತ ಹಳೆಯ ಶಾಸ್ತ್ರೀಯ ನಗರದಲ್ಲಿ ಕನ್ನಡ ಬಾವುಟವನ್ನು ಇಂತಹ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ಮನನೊಂದುಬಿಡುವಂತಹದ್ದು,” ಎಂದು ಸ್ಥಳೀಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರಸ್ತಾಪವಾಗುತ್ತಿದ್ದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಹಾಗೂ ಕನ್ನಡ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಆತಂಕಕಾರಿ ವಿಷಯವಾಗಿದೆ.

ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಬಾವುಟವನ್ನು ಕಿತ್ತಿ ಹಾಕಿ, ಹೊಸ ಬಾವುಟ ಹಾರಿಸುವ ಮೂಲಕ ಕನ್ನಡದ ಗೌರವವನ್ನು ಉಳಿಸಬೇಕಾಗಿದೆ.

ಕನ್ನಡಕ್ಕೆ ಕಣ್ಣು ಕುಗ್ಗದ ನಿಜವಾದ ಗೌರವ ಇದಾಗಿದೆ – ಹೆಸರಿಗಷ್ಟೆ ಕನ್ನಡಪರ ಅನ್ನಿಸದೇ, ಕ್ರಿಯಾತ್ಮಕವಾಗಿ ಕೂಡ ನಿಷ್ಠೆ ತೋರಿಸಲು ಇದು ಸೂಕ್ತ ಸಮಯ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago