ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಬೀದಿ ನಾಯಿಗಳ ಗುಂಪೊಂದು ಭಯಭೀತಗೊಳಿಸಿದ್ದ ಜಿಂಕೆ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತಂತಿ ಬೇಲಿಗೆ ತಾಗಿದು ಗಾಯಗೊಂಡಿತು. ಬೆಳ್ಳಂಬೆಳಗ್ಗೆ ಈ ದೃಶ್ಯ ನೋಡಿದ ಸ್ಥಳೀಯರು ತಕ್ಷಣವೇ ಓಡಿಸಿ, ಜಿಂಕೆಗೆ ಸಹಾಯ ಮಾಡಲು ಮುಂದಾದರು.
ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ತೀವ್ರ ಆಘಾತದಿಂದ ಬಳಲುತ್ತಿತ್ತು.
ವೈದ್ಯರು ಬದುಕಿಸಬೇಕೆಂಬ ಉದ್ದೇಶದಿಂದ ತ್ವರಿತ ಚಿಕಿತ್ಸೆ ನೀಡಿದರೂ, ಜಿಂಕೆಯ ಸ್ಥಿತಿ ಗಂಭೀರವಾಗಿತ್ತು ಮತ್ತು ಕೊನೆಗೆ ಅದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತು.
ಪಶು ವೈದ್ಯರ ಮೇಲ್ವಿಚಾರಣೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಇಲಾಖೆ ಅಧಿಕೃತ ಪ್ರಕ್ರಿಯೆಯ ಮೂಲಕ ಜಿಂಕೆಗೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…