Categories: CrimeLatest

ಬೆಂಗಳೂರಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ಖಾಸಗಿ ಭಾಗ ತೋರಿಸಿದ ಡೆಲಿವರಿ ಬಾಯ್ ಬಂಧನ, ಫ್ಲಿಪ್‌ಕಾರ್ಟ್‌ನಿಂದ ಸೇವೆಯಿಂದ ವಜಾ

ಬೆಂಗಳೂರು: ನಗರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಪಾರ್ಸೆಲ್ ವಿತರಿಸಲು ಬಂದಿದ್ದ ಡೆಲಿವರಿ ಬಾಯ್ ಮಹಿಳೆಯ ಅನುಮತಿ ಇಲ್ಲದೇ ಫ್ಲ್ಯಾಟ್‌ಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣಕ್ಕೆ ತ್ವರಿತವಾಗಿ ಸ್ಪಂದಿಸಲಾಗಿದೆ.

ಬಂಧಿತ ಆರೋಪಿಯನ್ನು ವಿಜಯ್ ಮಲ್ಲಿಕಾರ್ಜುನ ಕಾಮತ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75, 79 ಹಾಗೂ 329(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಏನಾಯಿತು?

ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಪಾರ್ಸೆಲ್ ವಿತರಿಸಲು ಬಂದಿದ್ದ ಡೆಲಿವರಿ ಬಾಯ್ ಮನೆಯ ಶೌಚಾಲಯ ಬಳಸಲು ಅವಕಾಶ ಕೇಳಿದ್ದಾನೆ. ಅಪರಿಚಿತರಿಗೆ ಮನೆಯೊಳಗೆ ಪ್ರವೇಶ ನೀಡಲು ಸಾಧ್ಯವಿಲ್ಲ ಎಂದು ಮಹಿಳೆ ಸೌಜನ್ಯದಿಂದ ನಿರಾಕರಿಸಿ, ಬೇರೆ ಫ್ಲ್ಯಾಟ್‌ನಲ್ಲಿ ಕೇಳುವಂತೆ ಸೂಚಿಸಿದ್ದಾಳೆ.

ಆದರೆ, ಮಹಿಳೆಯ ನಿರಾಕರಣೆಯ ನಡುವೆಯೂ ಆತ ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿ ಶೌಚಾಲಯಕ್ಕೆ ಹೋಗಿದ್ದಾನೆ. ಬಳಿಕ ಅಸಭ್ಯವಾಗಿ ಖಾಸಗಿ ಅಂಗ ಪ್ರದರ್ಶಿಸಿ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಆಘಾತಗೊಂಡ ಮಹಿಳೆ ಆತನನ್ನು ಪ್ರಶ್ನಿಸಿದಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸಿಸಿಟಿವಿ ಹಾಗೂ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಘಟನೆ ಬಳಿಕ ಮನೆಯಲ್ಲಿ ಇದ್ದರೂ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಮಹಿಳೆ ಬೇಸರ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಫ್ಲಿಪ್‌ಕಾರ್ಟ್ ಪ್ರತಿಕ್ರಿಯೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಫ್ಲಿಪ್‌ಕಾರ್ಟ್, ಆರೋಪಿಯ ವರ್ತನೆ ಸಂಪೂರ್ಣವಾಗಿ ಖಂಡನೀಯವಾಗಿದ್ದು, ಪ್ರಕರಣದ ಮಾಹಿತಿ ದೊರಕುತ್ತಿದ್ದಂತೆಯೇ ಆತನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.

ಗ್ರಾಹಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಕಂಪನಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಪೊಲೀಸ್ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇದೇ ವೇಳೆ, ಮುಂದಿನ ದಿನಗಳಲ್ಲಿ ಡೆಲಿವರಿ ಸಿಬ್ಬಂದಿಯ ಹಿನ್ನೆಲೆ ಪರಿಶೀಲನೆ ಸೇರಿದಂತೆ ಸುರಕ್ಷತೆಗೆ ಸಂಬಂಧಿಸಿದ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲಾಗುವುದು. ಗ್ರಾಹಕರ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ವರ್ತನೆಯನ್ನು ಸಹಿಸುವುದಿಲ್ಲ ಎಂದು ಫ್ಲಿಪ್‌ಕಾರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago