ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ. ಉಬರ್ ಪಾರ್ಸಲ್ ಸೇವೆಯ ಮೂಲಕ ಸ್ನೇಹಿತೆಯ ಜ್ಯಾಕೆಟ್ ಹಿಂತಿರುಗಿಸಲು ಬುಕ್ಕಿಂಗ್ ಮಾಡಿದ್ದ ವೇಳೆ ಡೆಲಿವರಿ ಎಕ್ಸಿಕ್ಯೂಟಿವ್ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಆನೇರಿ ಠಕ್ಕರ್, ಡೆಲಿವರಿ ಸಿಬ್ಬಂದಿ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ ಎಂದು ತಿಳಿಸಿದ್ದಾರೆ. ಪಾರ್ಸಲ್ ಹಸ್ತಾಂತರಿಸಿದ ನಂತರ ಅಲ್ಲಿಂದ ತೆರಳಬೇಕಿದ್ದ ಆತ, ಮನೆ ಒಳಗೆ ಫೋನ್ ಚಾರ್ಜ್ ಮಾಡಲು ಅವಕಾಶ ನೀಡುವಂತೆ ಕೇಳಿದ್ದಾನೆ. ಅಲ್ಲದೆ, ಬಾಲ್ಕನಿಯಲ್ಲಿ ಸಿಗರೇಟ್ ಸೇದಲು ಅನುಮತಿ ನೀಡುವಂತೆಯೂ ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಡೆಲಿವರಿ ಸಿಬ್ಬಂದಿಯ ಈ ವರ್ತನೆಯಿಂದ ಅನುಮಾನಗೊಂಡ ಯುವತಿ ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಬಳಿಕ ಸೆಕ್ಯೂರಿಟಿ ಗಾರ್ಡ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಂಡಿದ್ದಾರೆ.
ಈ ಘಟನೆ ನಗರದಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಆನ್‌ಲೈನ್ ಡೆಲಿವರಿ ಸೇವೆಗಳ ವಿಶ್ವಾಸಾರ್ಹತೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ. ಒಂಟಿಯಾಗಿ ವಾಸಿಸುವ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…