Categories: CorruptionLatest

₹10 ಸಾವಿರ ಲಂಚಕ್ಕೆ ಬೇಡಿಕೆ: ಠಾಣೆಯಲ್ಲೇ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಶಿವಕುಮಾರ್!

ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಶಿವಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಗಲಾಟೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ರಾಜೇಗೌಡ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಠಾಣೆಯ ಮಟ್ಟದಲ್ಲೇ ಜಾಮೀನು ನೀಡಿ ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿ, ಎಎಸ್‌ಐ ಶಿವಕುಮಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು, ಎಎಸ್‌ಐ ಜೊತೆ ನಡೆದ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಲೋಕಾಯುಕ್ತ ಅಧಿಕಾರಿಗಳು ಆರೋಪಿಯನ್ನು ಬಲೆಗೆ ಬೀಳಿಸುವ ಯೋಜನೆ ರೂಪಿಸಿದರು.

ಬುಧವಾರ ರಾತ್ರಿ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಿವಕುಮಾರ್ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಈ ಕಾರ್ಯಾಚರಣೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಲೇಪಾಕ್ಷಮೂರ್ತಿ ಹಾಗೂ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಪೊಲೀಸ್ ಇಲಾಖೆಯಲ್ಲಿಯೇ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಲೋಕಾಯುಕ್ತರ ದಾಳಿ ಮತ್ತೊಮ್ಮೆ ಸರ್ಕಾರಿ ನೌಕರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago