ಮಂಡ್ಯ, ಜುಲೈ 23 – ರಾಜ್ಯದ ಶಾಸನ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿರುವುದಕ್ಕೆ ಮತ್ತೊಂದು ಸ್ಪಷ್ಟ ಸಾಕ್ಷ್ಯ ದೊರೆತಿದ್ದು, ಮಂಡ್ಯದಲ್ಲಿ ಮೂವರು ಸರ್ಕಾರಿ ನೌಕರರು ಲಂಚ ಪಡೆಯುವ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಅನನ್ಯಾ ಹಾಗೂ ನಗರ ಯೋಜಕರು ಸೌಮ್ಯಾ ಮತ್ತು ಹರೀಶ್ ಎಂಬವರು, ನಗರ ಯೋಜನೆಯ ಅನುಮೋದನೆಗಾಗಿ 30 ಸಾವಿರ ರೂ. ಲಂಚ ಕೇಳಿದ್ದಾಗಿ ಆರೋಪ ಕೇಳಿಬಂದಿದೆ. ಈ ಸಂಬಂಧ ಮದ್ದೂರು ತಾಲೂಕಿನ ಚಂದೂಪುರದ ಪುನೀತ್ ಎಂಬುವವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ದೂರು ಆದಾರದ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಬ್ಯಾಟರಾಯನ ಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ನೌಕರರು 15 ಸಾವಿರ ರೂ.ಗಳ ಮೊದಲನೇ ಹಂತದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಕಚೇರಿಯಲ್ಲಿಯೇ ಬಂಧನೆ ನೆರವೇರಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆಗಾಗಿ ಅಧಿಕಾರಿಗಳು ಬಂಧನದಲ್ಲಿಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಸಾಗುತ್ತಿದೆ. ಈ ಘಟನೆ ರಾಜ್ಯದಲ್ಲಿ ಪ್ರಭುತ್ವ ನಡೆಸುತ್ತಿರುವ ಭ್ರಷ್ಟ ಚಟುವಟಿಕೆಗೆ ಇನ್ನೊಂದು ಉದಾಹರಣೆ ಎಂಬಂತಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…