ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಬಗ್ಗೆ ಜಟಾಪಟಿ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅವರು ಎಲ್ಲ ಪಕ್ಷದ ನಾಯಕರು ಬಾಯಿ ಮುಚ್ಚಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಬಳಿಕ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, “ನಿಮಗೆ ನೀಡಿದ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸಿ. ಯಾವಾಗ ಏನು ಮಾಡಬೇಕೆಂದು ಹೈಕಮಾಂಡ್ ನೋಡುತ್ತದೆ. ಕೆಲವುವರು ಹೇಳುತ್ತಿದ್ದಾರೆ, ಆದರೆ ಹೈಕಮಾಂಡ್ ಪ್ರಕಾರ ಕೆಲಸ ನಡೆಯಲಿದೆ. ಎಲ್ಲರೂ ಬಾಯಿ ಮುಚ್ಚಿ ಕಾರ್ಯನಿರ್ವಹಿಸಿ,” ಎಂದು ಹೇಳಿದರು.
“ನೀವು ಹೇಳಿದಾಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಎಂದಾದರೆ ಅದೇ ಸಮಯದಲ್ಲಿ ಅದು ಆಗುತ್ತದೆ. ಈ ರೀತಿಯ ಮಾತುಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ದಯವಿಟ್ಟು ವಿವಾದದಲ್ಲಿ ಭಾಗವಹಿಸಬೇಡಿ,” ಎಂದು ಖರ್ಗೆ ಎಚ್ಚರಿಕೆ ನೀಡಿದರು.
ಅವರು ಮುಂದುವರಿಯುವಂತೆ, “ಸಿಎಂ ಬದಲಾವಣೆಯ ವಿಚಾರವಿದ್ದರೆ, ಈಗ ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಡಿ. ನಾನು ಮತ್ತು ರಾಹುಲ್ ಗಾಂಧಿ ಇದ್ದೇವೆ. ಯಾವಾಗ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎಂದು ನಮಗೆ ಸ್ಪಷ್ಟ ಟಾರ್ಗೆಟ್ ಇರುತ್ತದೆ. ನಾವು ಅದನ್ನು ಅನುಸರಿಸಿ ನಿರ್ಣಯವನ್ನು ತೆಗೆದುಕೊಳ್ಳುತ್ತೇವೆ,” ಎಂದು ಹೇಳಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…